ಮಗುವಿನ ಹುಟ್ಟುಹಬ್ಬ ಆಚರಿಸಿ ನೇತ್ರಾವತಿ ನದಿಗೆ ಜಿಗಿದು ಮಹಿಳೆ ಆತ್ಮಹತ್ಯೆ

Public TV
1 Min Read
Mangaluru SUCIDE CASE

– ಕೋಲಾರ ಹೆದ್ದಾರಿಯಲ್ಲಿ ಲಾರಿ ನಿಲ್ಲಿಸಿ ಚಾಲಕ ಆತ್ಮಹತ್ಯೆ

ಮಂಗಳೂರು: ಮಗುವಿನೊಂದಿಗೆ ನೇತ್ರಾವತಿ ನದಿಗೆ (Netravathi River) ಜಿಗಿದು ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ (Mangaluru) ಹೊರವಲಯದ ಅಡ್ಯಾರ್ ಡ್ಯಾಂ ಬಳಿ ನಡೆದಿದೆ.

ಅಡ್ಯಾರ್ ನಿವಾಸಿ ಚೈತ್ರಾ ಹಾಗೂ ಒಂದು ವರ್ಷದ ಮಗು ದಿಯಾಂಶ್ ಮೃತ ದುರ್ದೈವಿಗಳು. ಇಬ್ಬರ ಮೃತದೇಹಗಳು ಹರೇಕಳ ಸೇತುವೆ ಬಳಿ ಪತ್ತೆಯಾಗಿವೆ. ಶುಕ್ರವಾರ ಮಧ್ಯಾಹ್ನದಿಂದ ತಾಯಿ ಮಗುವಿನೊಂದಿಗೆ ನಾಪತ್ತೆಯಾಗಿರುವುದಾಗಿ ತಿಳಿದುಬಂದಿತ್ತು.

ಗುರುವಾರವಷ್ಟೇ ಮಗುವಿನ ಹುಟ್ಟುಹಬ್ಬವನ್ನು ದೇರಳಕಟ್ಟೆಯ ಸೇವಾಶ್ರಮದಲ್ಲಿ ಚೈತ್ರಾ ಆಚರಿಸಿದ್ದರು. ತಾಂಯಿ ಮಗು ನಾಪತ್ತೆಯಾದ ಬೆನ್ನಲ್ಲೇ ಸಾಮಾಜಿಕ ಜಾಲತಾಣದ ಮೂಲಕ ಸಂಬಂಧಿಕರು ಇಬ್ಬರ ಹುಡುಕಾಟ ನಡೆಸಿದ್ದರು ಎನ್ನಲಾಗಿದೆ.

ಈ ಸಂಬಂಧ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲೂ ಪ್ರಕರಣ ದಾಖಲಾಗಿದೆ.

ಕೋಲಾರ; ಲಾರಿ ನಿಲ್ಲಿಸಿ ಚಾಲಕ ಆತ್ಮಹತ್ಯೆ:
ಕೋಲಾರದ (Kolar) ನರಸಾಪುರ ಕಾಫಿಡೇ ಬಳಿಯ ಹೆದ್ದಾರಿ ಪಕ್ಕದಲ್ಲಿ ಲಾರಿ ನಿಲ್ಲಿಸಿ ಚಾಲಕ ಆತ್ಮಹತ್ಯೆಗೆ ಶರಣಾಗಿರುವುದು ಬೆಳಕಿಗೆ ಬಂದಿದೆ. ಶ್ರೀನಿವಾಸಪುರ ಮೂಲದ ಮಂಜುನಾಥ್ ಆತ್ಮಹತ್ಯೆಗೆ ಶರಣಾದ ಲಾರಿ ಚಾಲಕ ಎಂದು ತಿಳಿದುಬಂದಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ವೇಮಗಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ

Share This Article