ತುಮಕೂರು: ಗೃಹಿಣಿಯೋರ್ವಳು ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಗುಬ್ಬಿ ತಾಲೂಕಿನ ಸಿ.ನಂದಿಹಳ್ಳಿಯಲ್ಲಿ ನಡೆದಿದೆ.
ರಮ್ಯಾ ಆತ್ಮಹತ್ಯೆ ಮಾಡಿಕೊಂಡ ಗೃಹಿಣಿ. ಮೃತ ರಮ್ಯಾಗೆ ನವೀನ್ ಜೊತೆ ಮೂರು ವರ್ಷದ ಹಿಂದೆ ಮದುವೆಯಾಗಿತ್ತು. ದಂಪತಿಗೆ ಎರಡು ವರ್ಷದ ಹೆಣ್ಣು ಮಗು ಕೂಡ ಇದೆ. ಆದರೆ ಶನಿವಾರ ರಮ್ಯಾ ವಿಷ ಕುಡಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಇತ್ತ ಮೃತ ರಮ್ಯಾ ಪೋಷಕರು ಈ ಸಾವಿನ ಹಿಂದೆ ಅನುಮಾನ ವ್ಯಕ್ತಪಡಿಸಿದ್ದಾರೆ.
ರಮ್ಯಾ ಪತಿ ನವೀನ್ ಹಾಗೂ ಅತ್ತೆ ಅನುಸೂಯಮ್ಮ ವರದಕ್ಷಿಣೆ ಕಿರುಕುಳ ಕೊಡುತ್ತಿದ್ದರು. ಅವರೇ ಕ್ರಿಮಿನಾಶಕ ನೀಡಿ ಕೊಲೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಇದರಿಂದ ರೊಚ್ಚಿಗೆದ್ದ ರಮ್ಯಾ ಸಂಬಂಧಿಕರು ಮತ್ತು ಪೋಷಕರು ಅತ್ತೆ ಅನುಸೂಯಮ್ಮಾಗೆ ಚೆನ್ನಾಗಿ ಥಳಿಸಿದ್ದಾರೆ.
ಈ ಘಟನೆ ಸಂಬಂಧ ಚೇಳೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.