ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ – ಪತಿ ಕುಟುಂಬದ ಮೇಲೆ ಪ್ರಕರಣ ದಾಖಲು

Public TV
1 Min Read
KOLAR SP

ಕೋಲಾರ: ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣದಲ್ಲಿ ಪತಿ ಸೇರಿ 6 ಜನರ ವಿರುದ್ಧ ಅತ್ಮಹತ್ಯೆಗೆ ಪ್ರಚೋದನೆ ಕೇಸ್ ದಾಖಲಾಗಿದೆ.

ಮೃತ ಮಹಿಳೆಯನ್ನು ಸುಗುಣ ಎಂದು ಗುರುತಿಸಲಾಗಿದೆ. ಆತ್ಮಹತ್ಯೆಗೂ ಮುನ್ನ ತನ್ನ ಗಂಡ ಮುರಳಿ, ಅತ್ತೆ ಹಾಗೂ ಆತನ ಕುಟುಂಬಸ್ಥರ ಕಿರುಕುಳ ಕಾರಣ ಎಂದು ಡೆತ್‍ನೋಟ್‍ನಲ್ಲಿ ಉಲ್ಲೇಖಿಸಿದ್ದಾಳೆ. ಡೆತ್‍ನೋಟ್‍ನ್ನು ಮೊಬೈಲ್ ಮೂಲಕ ತನ್ನ ಸಹೋದರ ನಿಖಿತ್‍ಗೆ ಕಳುಹಿಸಿದ್ದಾಳೆ. ಅದರಂತೆ ಮೃತ ಸುಗುಣ ಡೆತ್‍ನೋಟ್ ಹಾಗೂ ಆಕೆಯ ಅಣ್ಣ ಸತೀಶ್ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಜು.3ರಿಂದ 10 ದಿನಗಳ ಕಾಲ ಅಧಿವೇಶನ – ಜೂನ್ 26ರಿಂದ ಮೂರು ದಿನಗಳ ಕಾಲ ನೂತನ ಶಾಸಕರಿಗೆ ತರಬೇತಿ

ಇಬ್ಬರು ಮಕ್ಕಳನ್ನ ಕೊಂದ ಹಿನ್ನೆಲೆ ಸುಗುಣ ವಿರುದ್ಧ ಐಪಿಸಿ (IPC) ಸೆಕ್ಷನ್ 302 ರಡಿ ಪ್ರಕರಣ ದಾಖಲಾಗಿದೆ. ಡೆತ್‍ನೋಟ್ ಆಧರಿಸಿ 6 ಜನರ ವಿರುದ್ಧ ಐಪಿಸಿ ಸೆಕ್ಷನ್ 306 ಅಡಿಯಲ್ಲಿ ದೂರು ದಾಖಲಾಗಿದೆ. 6 ಜನರನ್ನ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುವುದು ಎಂದು ಕೋಲಾರದ (Kolar) ಎಸ್ಪಿ ನಾರಾಯಣ ತಿಳಿಸಿದ್ದಾರೆ.

ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದ್ದು, ಮೃತಳ ಹುಟ್ಟೂರು ಗಿರ್ನಹಳ್ಳಿಯಲ್ಲಿ ಮೂರು ಜನರ ಅಂತ್ಯಸಂಸ್ಕಾರವನ್ನು ನೆರವೇರಿಸಲಾಗಿದೆ. ಇದನ್ನೂ ಓದಿ: ಬ್ರ‍್ಯಾಂಡ್ ಬೆಂಗಳೂರು ಕಟ್ಟಲು ನೀವೂ ಕೊಡಿ ಸಲಹೆ: ಸಾರ್ವಜನಿಕರಲ್ಲಿ ಡಿಕೆಶಿ ಮನವಿ

Share This Article