ಪೊಲೀಸರಿಂದ ಕಿರುಕುಳ ಆರೋಪ – ಸೆಲ್ಫಿ ವೀಡಿಯೋ ಮಾಡಿ ಮಹಿಳೆ ಆತ್ಮಹತ್ಯೆ

Public TV
1 Min Read
Madhuri

ರಾಮನಗರ: ಪೊಲೀಸರು (Police) ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಮಹಿಳೆಯೊಬ್ಬಳು ಸೆಲ್ಫಿ ವೀಡಿಯೋ ಮಾಡಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚನ್ನಪಟ್ಟಣದ (Channapatna) ಕೋಟೆ ಬಡಾವಣೆಯಲ್ಲಿ ನಡೆದಿದೆ.

ಮೃತ ಮಹಿಳೆಯನ್ನು ಮಾಧುರಿ ಎಂದು ಗುರುತಿಸಲಾಗಿದೆ. ನಿದ್ರೆ ಮಾತ್ರೆ ಸೇವಿಸಿದ್ದ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಆಕೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾಳೆ. ವೀಡಿಯೋದಲ್ಲಿ ಚನ್ನಪಟ್ಟಣ ಟೌನ್ ಪೊಲೀಸರ ವಿರುದ್ಧ ಕಿರುಕುಳ ಆರೋಪ ಮಾಡಿದ್ದಾಳೆ. ಇದನ್ನೂ ಓದಿ: ಮೆಡಿಕಲ್ ಕಾಲೇಜ್ ಸ್ಥಳಾಂತರಕ್ಕೆ ಆಕ್ರೋಶ – ರಾಮನಗರ ಬಂದ್‍ಗೆ ಕರೆ

ಗಲಾಟೆ ವಿಚಾರವಾಗಿ ದೂರು ನೀಡಲು ಪೊಲೀಸ್ ಠಾಣೆಗೆ ಹೋಗಿದ್ದು, ಈ ವೇಳೆ ಪೊಲೀಸರು ಅವಮಾನ ಮಾಡಿದ್ದಾರೆ. ನಿನ್ನ ಮೇಲೆಯೇ ಹಲವು ಕೇಸ್‍ಗಳಿವೆ ಎಂದು ಮೊಬೈಲ್ ಕಿತ್ತುಕೊಂಡು ಕಳುಹಿಸಿದ್ದಾರೆ ಎಂದು ಮಹಿಳೆ ದೂರಿದ್ದಾಳೆ. ಅಲ್ಲದೇ ನನಗೆ ನ್ಯಾಯ ಕೊಡಿಸಿ ಎಂದು ಆಗ್ರಹಿಸಿದ್ದಳು.

ಬಳಿಕ ನಿದ್ರೆ ಮಾತ್ರೆ ಸೇವಿಸಿ ಅಸ್ವಸ್ಥಗೊಂಡಿದ್ದ ಮಹಿಳೆಯನ್ನು ಮಂಡ್ಯದ ಮಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಮಹಿಳೆ ಸಾವನ್ಮಪ್ಪಿದ್ದಾಳೆ. ಈ ಸಂಬಂಧ ಚನ್ನಪಟ್ಟಣ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ನದಿಗೆ ಕಾರ್ಖಾನೆಗಳ ತ್ಯಾಜ್ಯ – ಸಾವಿರಾರು ಮೀನುಗಳ ಮಾರಣಹೋಮ

Web Stories

Share This Article