ರಾಜಸ್ಥಾನ: ಪೊಲೀಸ್ ಠಾಣೆಗೆ ದೂರು ನೀಡಲು ಬಂದಿದ್ದ ವೃದ್ಧನ ಎದುರೇ ಮೇಜಿನ ಮೇಲೆ ಕಾಲು ಚಾಚಿಕೊಂಡು ಕುಳಿತಿದ್ದ ಮಹಿಳಾ ಕಾನ್‌ಸ್ಟೇಬಲ್(Lady Constable) ಫೋಟೋ ಸೋಷಿಯಲ್(Rajasthan Viral Photo) ಮೀಡಿಯಾದಲ್ಲಿ ವೈರಲ್ ಆಗಿದೆ. ಸಿಬ್ಬಂದಿಯ ಈ ವರ್ತನೆಗೆ ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಮಹಿಳಾ ಕಾನ್‌ಸ್ಟೇಬಲ್‌ನನ್ನ ಅಮಾನತು ಮಾಡಲಾಗಿದೆ.
ಈ ಘಟನೆ ರಾಜಸ್ಥಾನದ ಡುಂಗರ್‌ಪುರ ಜಿಲ್ಲೆಯ ಬಿಚ್ಚಿವಾರಾ ಪೊಲೀಸ್ ಠಾಣೆಯಲ್ಲಿ ನಡೆದಿದೆ. ವೃದ್ಧನೊಬ್ಬ ದೂರು ದಾಖಲಿಸಲು ಠಾಣೆಗೆ ಬಂದಿದ್ದ ವೇಳೆ, ಮಹಿಳಾ ಕಾನ್‌ಸ್ಟೇಬಲ್ ಮೇಜಿನ ಮೇಲೆ ಎರಡೂ ಕಾಲುಗಳನ್ನು ಇಟ್ಟು ಕುಳಿತಿರುವ ದೃಶ್ಯವನ್ನು ಠಾಣೆಯಲ್ಲಿದ್ದವರು ಫೋಟೋ ತೆಗೆದಿದ್ದಾರೆ. ವೃದ್ಧ, ಲೇಡಿ ಕಾನ್‌ಸ್ಟೆಬಲ್ ಎದುರೇ ಕುಳಿತಿದ್ದರೂ, ಆತನ ದೂರನ್ನು ಆಲಿಸದೆ ನಿರ್ಲಕ್ಷ್ಯ ತೋರಿದ್ದಾರೆ ಎಂದು ಆರೋಪಿಸಲಾಗಿದೆ. ಈ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದಂತೆ ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ.
ಈ ವೈರಲ್ ಫೋಟೋಗೆ ನೆಟ್ಟಿಗರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸರ್ಕಾರಿ ನೌಕರರಾಗಿ ಸಾರ್ವಜನಿಕರೊಂದಿಗೆ ಈ ರೀತಿ ವರ್ತನೆ ಮಾಡುವುದು ಸರಿಯಲ್ಲ ಎಂದು ಹಲವರು ಟೀಕಿಸಿದ್ದಾರೆ.ಇದನ್ನೂ ಓದಿ: ರೈತರನ್ನ ಒಕ್ಕಲೆಬ್ಬಿಸಿ ಟೌನ್‌ಶಿಪ್ ಮಾಡೋದ್ರಲ್ಲಿ ಅರ್ಥವಿಲ್ಲ: ಪರಮೇಶ್ವರ್
ಪ್ರಕರಣ ಗಂಭೀರವಾಗುತ್ತಿದ್ದಂತೆ ರಾಜಸ್ಥಾನ ಪೊಲೀಸರು ತಕ್ಷಣ ಕ್ರಮ ಕೈಗೊಂಡಿದ್ದಾರೆ. ಮಹಿಳಾ ಕಾನ್‌ಸ್ಟೇಬಲ್‌ನನ್ನು ಅಮಾನತು ಮಾಡಲಾಗಿದೆ. ಈ ಬಗ್ಗೆ ಶಿಸ್ತು ಕ್ರಮ ಕೈಗೊಂಡಿದ್ದಾರೆ ಎಂದು ಡುಂಗರ್‌ಪುರ ಪೊಲೀಸರು ತಿಳಿಸಿದ್ದಾರೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ.ಇದನ್ನೂ ಓದಿ: ರಾಮಮಂದಿರ ದೇಣಿಗೆ; 42 ದಿನಗಳಲ್ಲಿ 70 ಬಾರಿ ಕಳ್ಳತನ – ತನಿಖೆ ವೇಳೆ ಎಸ್‌ಐಟಿ ಸಿಕ್ತು ಸಾಕ್ಷ್ಯ
