ಬೆಂಗಳೂರು: ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯೊಬ್ಬರನ್ನು ಬರ್ಬರ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ರಾಜಗೋಪಾಲ ನಗರದ ಹೆಗ್ಗನಹಳ್ಳಿಯಲ್ಲಿ ನಡೆದಿದೆ.
ಕಬಾಬ್ ಮತ್ತು ಎಗ್ ರೈಸ್ ಮಾರಾಟ ಮಾಡುತ್ತಿದ್ದ ಉಮೇಶ್ ಕೊಲೆಯಾದ ದುರ್ದೈವಿ. ಭಾನುವಾರ ರಾತ್ರಿ ಏಕಾಏಕಿ ಬೈಕ್ ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು, ಉಮೇಶ್ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದ್ದಾರೆ. ಪರಿಣಾಮ ತೀವ್ರ ರಕ್ತಸ್ರಾವದಿಂದ ವ್ಯಾಪಾರಿ ಉಮೇಶ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಈ ವೇಳೆ ಸ್ಥಳಕ್ಕೆ ಬಂದ ಉಮೇಶ್ ಪತ್ನಿ ಗಂಡನ ಶವದ ಮುಂದೆ ಗೋಳಾಟ ಮನ ಕಲುಕುವಂತಿತ್ತು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರೋ ರಾಜಗೋಪಾಲನಗರ ಪೋಲೀಸರು, ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ.