ನವದೆಹಲಿ: 38 ವರ್ಷದ ಮಹಿಳೆ ಹಾಗೂ ಅವರ ಪುತ್ರಿ ಮೇಲೆ ನಡುರಸ್ತೆಯಲ್ಲಿ ಗ್ಯಾಂಗ್‍ವೊಂದು ದಾಳಿ ಮಾಡಿರುವ ಘಟನೆ ದೆಹಲಿಯ ಶಾಲಿಮಾರ್ ಬಾಗ್ ಪ್ರದೇಶದಲ್ಲಿ ನಡೆದಿದೆ.
Advertisement
ಈ ಘಟನೆ ನವೆಂಬರ್ 19ರಂದು ನಡೆದಿದ್ದು, ಘಟನೆಯ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ವೀಡಿಯೋದಲ್ಲಿ ಮಹಿಳೆ ಕಾರನ್ನು ಪಾರ್ಕ್ ಮಾಡಿದಾಗ ಅವರ ಮಗಳು ಕಾರಿನಿಂದ ಕೆಳಗೆ ಇಳಿಯುತ್ತಿದ್ದಂತೆ ಏಕಾಏಕಿ ಇಬ್ಬರು ಮಹಿಳೆಯರು ಸೇರಿದಂತೆ ಇಬ್ಬರು ಪುರುಷರು ಮಹಿಳೆಯ ಪುತ್ರಿ ಮೇಲೆ ದೈಹಿಕವಾಗಿ ಹಲ್ಲೆ ಮಾಡಲು ಆರಂಭಿಸುತ್ತಾರೆ. ಈ ವೇಳೆ ಮಗಳನ್ನು ರಕ್ಷಿಸಲು ಮುಂದಾದ ತಾಯಿಗೂ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಪಾರ್ಕಿಂಗ್ ಪ್ರದೇಶದಲ್ಲಿ ಈ ಗ್ಯಾಂಗ್ ದೊಣ್ಣೆಯಿಂದ ಹೊಡೆಯುವುದು, ಕಾಲಿನಿಂದ ತೀವ್ರವಾಗಿ ಒದೆಯುವುದನ್ನು ಕಾಣಬಹುದಾಗಿದೆ. ಇದನ್ನೂ ಓದಿ: ಮುಖ್ಯಮಂತ್ರಿ ತೀರ್ಮಾನಕ್ಕೆ ಬದ್ಧ: ಎಸ್.ಆರ್ ವಿಶ್ವನಾಥ್
Advertisement
Advertisement
ಘಟನೆ ಬಳಿಕ ಮಹಿಳೆ ಹಾಗೂ ಆಕೆಯ ಪುತ್ರಿ ಆಸ್ಪತ್ರೆಗೆ ದಾಖಲಿಸಲಾಗಿ ಇದೀಗ ಚೇತರಿಸಿಕೊಂಡು ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೂರಿನ ಅನ್ವಯ ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಷನ್‍ಗಳ ಅಡಿಯಲ್ಲಿ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ. ಸದ್ಯ ಸಿಸಿಟಿವಿ ದೃಶ್ಯಾವಳಿಯಲ್ಲಿ ಕಂಡು ಬಂದ ಇಬ್ಬರು ಆರೋಪಿ ಮಹಿಳೆಯರನ್ನು ಪೊಲೀಸರು ಬಂಧಿಸಿದ್ದು, ಮತ್ತಿಬ್ಬರು ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಇದನ್ನೂ ಓದಿ: ನನ್ನ ಸೇವೆಯನ್ನು ಸಹಿಸಲಾಗದೆ ಕೊಲೆಗೆ ಸಂಚು: ಎಸ್.ಆರ್ ವಿಶ್ವನಾಥ್
Advertisement
#WATCH | A group of persons beat up a woman with sticks in a residential colony in Shalimar Bagh area of Delhi on November 19
Based on the woman’s complaint, Delhi Police has registered an FIR against unknown persons, it said.
(CCTV footage of the incident) pic.twitter.com/YmZRtD7COu
— ANI (@ANI) December 1, 2021
ಹಲ್ಲೆ ನಡೆಸಿರುವ ಆರೋಪಿಗಳು ಎಎಪಿ ಶಾಸಕಿ ಬಂದಾನ ಕುಮಾರಿ ಅವರ ಬೆಂಬಲಿಗಾರಾಗಿದ್ದಾರೆ ಎಂದು ಮಹಿಳೆ ಆರೋಪಿಸಿದ್ದಾರೆ. ಆದರೆ ಈ ಆರೋಪ ಕುರಿತಂತೆ ಪ್ರತಿಕ್ರಿಯಿಸಿರು ಬಂದಾನ ಕುಮಾರಿ ಅವರು, ಮಹಿಳೆ ನನ್ನ ನೆರೆ ಮನೆಯಲ್ಲಿ ವಾಸಿಸುತ್ತಾಳೆ. ಆಕೆ ಯಾವಾಗಲೂ ನನ್ನ ಮೇಲೆ ಆರೋಪ ಮಾಡುತ್ತಲೇ ಇರುತ್ತಾಳೆ. ಈ ಪ್ರಕರಣಕ್ಕೂ ನನಗೂ ಯಾವುದೇ ಸಂಬಂಧವಿಲ್ಲ ಎಂದು ತಿರುಗೇಟು ನೀಡಿದ್ದಾರೆ.