ಬೆಂಗಳೂರು: ಪ್ರತಿಭಟನಾ ಜಾಥಾದಲ್ಲಿ ಪಾಲ್ಗೊಂಡ ಮಹಿಳೆಗೆ ಅಪಘಾತವಾಗಿ ಸಾವನ್ನಪ್ಪಿರುವ ಘಟನೆ ನೆಲಮಂಗಲ ಸಮೀಪದ ರಾಷ್ಟ್ರೀಯ ಹೆದ್ದಾರಿ 4 ಕುಲವನಹಳ್ಳಿ ಬಳಿ ಅಪಘಾತ.
ರೇಣುಕಮ್ಮ (55) ಅಪಘಾತದಿಂದ ಮೃತಪಟ್ಟ ಮಹಿಳೆ. ರಾಜ್ಯ ಸಂಪೂರ್ಣ ಮದ್ಯ ನಿಷೇಧಕ್ಕೆ ಆಗ್ರಹಿಸಿ, ಮಹಿಳೆಯರ ತಂಡ ಚಿತ್ರದುರ್ಗದಿಂದ ಬೆಂಗಳೂರಿಗೆ ಕಾಲ್ನಡಿಗೆ ಹೊರಟ್ಟಿದ್ದರು. ಇನ್ನೂ ಜಾಥದಲ್ಲಿ ದಾರಿ ಮಧ್ಯೆ ಪ್ರತಿಭಟನಾ ನಿರತ ಮಹಿಳೆಗೆ ಬೈಕ್ ಡಿಕ್ಕಿಯಾದ ಪರಿಣಾಮ ರೇಣುಕಮ್ಮ ಮೃತಪಟ್ಟಿದ್ದಾರೆ.
Advertisement
Advertisement
ರೇಣುಕಮ್ಮ ಮೂಲತಃ ರಾಯಚೂರು ಜಿಲ್ಲೆಯ ಲಿಂಗಸೂರು ತಾಲೂಕಿನ ಖೈರಾವಡಗಿ ಗ್ರಾಮದ ನಿವಾಸಿಯಾಗಿದ್ದಾರೆ. ಸುಮಾರು 2500ಕ್ಕೂ ಹೆಚ್ಚು ಮಹಿಳೆಯರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದು, ಭಾನುವಾರ ಸಿದ್ದಗಂಗಾ ಮಠದಿಂದ ಹೊರಟು ನೆಲಮಂಗಲ ತಾಲೂಕಿನ ಕುಲವನಹಳ್ಳಿಯಲ್ಲಿ ಜಾಥದ ಮಹಿಳೆಯರು ವಾಸ್ತವ್ಯ ಹೂಡಿದ್ದರು.
Advertisement
ಈ ಜಾಥವು ಜನವರಿ 30 ರಂದು ಬೆಂಗಳೂರಿನ ವಿಧಾನಸೌಧಕ್ಕೆ ಮುತ್ತಿಗೆ ಹಾಕಲಿದ್ದು, ದಾರಿ ಮಧ್ಯ ಈ ದುರ್ಘಟನೆ ಸಂಭವಿಸಿದೆ. ಈ ಘಟನೆಯ ಸಂಬಂಧ ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಸಾವಿಗೆ ಸರ್ಕಾರವೇ ಹೊಣೆ ಎಂದು ಪ್ರತಿಭಟನಾಕಾರರು ಆಕ್ರೋಶವನ್ನ ವ್ಯಕ್ತಪಡಿಸಿದ್ದಾರೆ.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv