ದಾವಣಗೆರೆ: ಗೃಹಿಣಿಯೊಬ್ಬರು ದಾರುಣವಾಗಿ ಮೃತಪಟ್ಟ ಘಟನೆ ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ಕಜ್ಜರಿ ಗ್ರಾಮದಲ್ಲಿ ಘಟನೆ ನಡೆದಿದೆ.
ರೇಖಾ (22) ಮೃತ ಗೃಹಿಣಿಯಾಗಿದ್ದು, ಪತಿ ಆನಂದ ವರದಕ್ಷಿಣೆ ಕಿರುಕುಳಕ್ಕೆ ಆಕೆ ಬಲಿಯಾಗಿದ್ದಾರೆ ಅಂತ ರೇಖಾ ಪೋಷಕರು ಆರೋಪಿಸುತ್ತಿದ್ದಾರೆ.
ಭಾನುವಾರ ರೇಖಾಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರೋ ಆರೋಪ ಕೇಳಿಬಂದಿತ್ತು. ಗಂಭೀರ ಗಾಯಾಳು ರೇಖಾ ಅವರನ್ನು ದಾವಣಗೆರೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ಇದೀಗ ಚಿಕಿತ್ಸೆ ಫಲಿಸದೆ ತಡ ರಾತ್ರಿ ರೇಖಾ ಮೃತಪಟ್ಟಿದ್ದಾರೆ.
ಮೂಲತಃ ಶಿವಮೊಗ್ಗದ ರೇಖಾಳನ್ನು 3 ವರ್ಷದ ಹಿಂದೆ ಆನಂದ್ ಗೆ ಕೊಟ್ಟು ಮದುವೆ ಮಾಡಿದ್ದರು. ಬಳಿಕ ಆನಂದ್, ರೇಖಾ ಬಳಿ 2 ಲಕ್ಷ ವರದಕ್ಷಿಣೆ ತರುವಂತೆ ಪೀಡಿಸುತ್ತಿದ್ದನು. ಇದೀಗ ವರದಕ್ಷಿಣೆಗಾಗಿ ಕೊಲೆ ಮಾಡಿದ್ದಾನೆಂದು ರೇಖಾ ಪೋಷಕರು ಆರೋಪಿಸುತ್ತಿದ್ದಾರೆ.
ಸದ್ಯ ಆನಂದ್ ಹಾಗೂ ಕುಟುಂಬದವರನ್ನು ವಶಕ್ಕೆ ಪಡೆದರುವ ಪೊಲೀಸರು, ರಾಣೆಬೆನ್ನೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.