ಮುಂಬೈ: ಮಹಾರಾಷ್ಟ್ರದ ಥಾಣೆ ರೈಲ್ವೇ ನಿಲ್ದಾಣದ ಆಸ್ಪತ್ರೆಯಲ್ಲಿ ಕೇವಲ ಒಂದು ರೂಪಾಯಿಯಲ್ಲಿ ಹೆರಿಗೆ ಮಾಡಿಸಲಾಗಿದೆ.
ರಾಯಗಢ ಜಿಲ್ಲೆಯ ಸಮೀಪದ ಕರ್ಜತ್‍ನಿಂದ 29 ವರ್ಷದ ತುಂಬು ಗರ್ಭಿಣಿ ಸುಭಂತಿ ಪಾತ್ರಾ ಮುಂಬೈಗೆ ರೈಲಿನಲ್ಲಿ ಪ್ರಯಾಣ ಬೆಳೆಸಿದ್ದರು. ಸುಮಾರು 35 ಕಿ.ಮೀ. ದೂರದ ಊರಿಗೆ ಪ್ರಯಾಣಿಸುವಷ್ಟರಲ್ಲಿ ಸುಭಂತಿಗೆ ಹೆರಿಗೆ ನೋವು ಕಾಣಿಸಿಕೊಂಡಿತ್ತು. ಈ ವಿಷಯವನ್ನು ರೈಲ್ವೇ ಇಲಾಖೆ ಅಧಿಕಾರಿಗಳ ಗಮನಕ್ಕೆ ತರಲಾಗಿತ್ತು.
Advertisement
Advertisement
ಮಾರ್ಗ ಮಧ್ಯೆ ಥಾಣೆ ರೈಲ್ವೇ ನಿಲ್ದಾಣಕ್ಕೆ ರೈಲು ಬಂದು ನಿಲ್ಲುತ್ತಿದ್ದಂತೆ ಸುಭಂತಿ ಪಾತ್ರಾರನ್ನು 1 ರೂ. ಕ್ಲಿನಿಕ್‍ಗೆ ದಾಖಲಿಸಿದರು. ಕ್ಲಿನಿಕ್‍ಗೆ ಸೇರಿಸಿ 15 ನಿಮಿಷದೊಳಗೆ ಸುಭಂತಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ತಾಯಿ-ಮಗು ಇಬ್ಬರೂ ಆರೋಗ್ಯವಾಗಿದ್ದು, ಹೆರಿಗೆಯಾದ ಬಳಿಕ ಇಬ್ಬರನ್ನೂ ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿದೆ.
Advertisement
ಥಾಣೆ ರೈಲ್ವೇ ನಿಲ್ದಾಣದಲ್ಲಿರುವ 1 ರೂ. ಕ್ಲಿನಿಕ್ ಅನ್ನು ಖಾಸಗಿಯವರು ನಡೆಸುತ್ತಿದ್ದಾರೆ. ಈ ಕ್ಲಿನಿಕ್‍ನಲ್ಲಿ ಇದುವರೆಗೂ 10 ಮಂದಿಗೆ ಹೆರಿಗೆ ಮಾಡಿಸಲಾಗಿದೆ. ರೈಲ್ವೇ ನಿಲ್ದಾಣದಲ್ಲಿರುವ ಒಂದು ರೂಪಾಯಿ ಆಸ್ಪತ್ರೆಗೆ ಮತ್ತು ಸಿಬ್ಬಂದಿಯ ಕಾರ್ಯಕ್ಕೆ ಸಾರ್ವಜನಿಕರಿಂದ ಪ್ರಶಂಸೆ ವ್ಯಕ್ತವಾಗಿದೆ.