ಚಿಕ್ಕಮಗಳೂರು: ಕಾಡುಕೋಣ (Wild Buffalo) ದಾಳಿಗೆ ಮಹಿಳೆಯೊಬ್ಬರು (Woman) ಬಲಿಯಾದ ಘಟನೆ ಕಳಸ (Kalasa) ತಾಲೂಕಿನ ಬಿಳಗುಳಿ ಗ್ರಾಮದ ಬಳಿ ನಡೆದಿದೆ.
ಶೀಲಾ (52) ಮೃತ ದುರ್ದೈವಿ. ತೋಟದಲ್ಲಿ ಮಹಿಳೆ ಕೆಲಸ ಮಾಡುತ್ತಿದ್ದರು. ಈ ವೇಳೆ, ಕಾಡುಕೋಣ ಏಕಾಏಕಿ ದಾಳಿ ನಡೆಸಿದೆ. ಇದರಿಂದ ಮಹಿಳೆಯ ಹೊಟ್ಟೆ ಹಾಗೂ ಕತ್ತಿನ ಭಾಗಕ್ಕೆ ಗಂಭೀರ ಗಾಯವಾಗಿದೆ. ಸ್ಥಳೀಯರು ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ ಮಾರ್ಗಮಧ್ಯೆಯೇ ರಕ್ತಸ್ರಾವದಿಂದ ಅವರು ಮೃತಪಟ್ಟಿದ್ದಾರೆ.
ಈ ಸಂಬಂಧ ಕಳಸ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಳಸ ತಾಲೂಕಿನ ಮೈದಾಡಿಯ ಯಮಗೊಂಡ ಎಸ್ಟೇಟ್‌ನಲ್ಲಿ ಏಪ್ರಿಲ್‌ನಲ್ಲಿ ಯುವಕನೊಬ್ಬ ಕಾಡುಕೋಣದ ದಾಳಿಗೆ ಬಲಿಯಾಗಿದ್ದ.
ಕಳಸದಲ್ಲಿ ನಿರಂತರವಾಗಿರೋ ಕಾಡುಕೋಣ ದಾಳಿ ಪ್ರಕರಣಗಳು ನಡೆಯುತ್ತಿವೆ. ಕೆಲವರು ಗಂಭೀರ ಗಾಯಗೊಂಡಿದ್ದಾರೆ. ಇನ್ನೂ ಕೆಲವರು ದಾಳಿಯಿಂದ ಸಾವನ್ನಪ್ಪಿದ್ದಾರೆ. ಕಾಡುಕೋಣಗಳ ಹಾವಳಿಗೆ ಶಾಶ್ವತವಾಗಿ ಬ್ರೇಕ್ ಹಾಕುವಂತೆ ಮಲೆನಾಡಿಗರು ಆಗ್ರಹಿಸಿದ್ದಾರೆ.
