ಬಳ್ಳಾರಿ: ಜಿಲ್ಲೆಯ ಹೊಸಪೇಟೆಯಲ್ಲಿ ಕಲುಷಿತ ನೀರು (Polluted Water) ಕುಡಿದು ಮಹಿಳೆ (Woman) ಸಾವಿಗೀಡಾದ ಘಟನೆ ನಡೆದಿದೆ. ಸಚಿವ ಆನಂದ್ ಸಿಂಗ್ ಅವರ ಮನೆಯ ಬಳಿಯಲ್ಲೇ ಈ ಘಟನೆ ನಡೆದಿದ್ದು, ಹೊಸಪೇಟೆಯ ಜನರು ಆತಂಕಕ್ಕೀಡಾಗಿದ್ದಾರೆ.
ಕಳೆದೊಂದು ವಾರದಿಂದ ಹೊಸಪೇಟೆಯ ರಾಣಿಪೇಟೆ ಪ್ರದೇಶಕ್ಕೆ ಕಲುಷಿತ ನೀರು ಸರಬರಾಜಾಗಿದೆ. ಇದನ್ನು ತಿಳಿಯದೇ ಕಲುಷಿತ ನೀರು ಸೇವಿಸಿ ಸ್ಥಳೀಯ ಮಹಿಳೆ ಲಕ್ಷ್ಮೀದೇವಿ ಮಂಗಳವಾರ ರಾತ್ರಿ ಸಾವನ್ನಪ್ಪಿದ್ದಾರೆ. ಕಲುಷಿತ ನೀರು ಸೇವಿಸಿದ 50ಕ್ಕೂ ಹೆಚ್ಚಿನ ಜನರು ಅನಾರೋಗ್ಯಕ್ಕೀಡಾಗಿ ಸರ್ಕಾರಿ, ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
Advertisement
Advertisement
ಸಚಿವರ ಆಡಳಿತ ಕಚೇರಿ ಹಿಂದಿನ ಭಾಗದ ಮನೆಯಲ್ಲಿಯೇ ಲಕ್ಷ್ಮೀದೇವಿ ಸಾವನ್ನಪ್ಪಿದ್ದಾರೆ ಎನ್ನುವುದು ಗೊತ್ತಾಗುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಸಚಿವ ಆನಂದ್ ಸಿಂಗ್, ಡಿಸಿ ವೆಂಕಟೇಶ ಬಾಬು, ಎಸ್‌ಪಿ ಶ್ರೀಹರಿ ಬಾಬು ಖುದ್ದು ಪರಿಸ್ಥಿತಿ ಆಲಿಸಿದ್ದಾರೆ. ಕಲುಷಿತ ನೀರು ಸೇವನೆಯಿಂದ ಮಹಿಳೆ ಮೃತಪಟ್ಟಿರುವುದರಿಂದ ಆರೋಗ್ಯ ಇಲಾಖೆ, ನಗರಸಭೆ ಫುಲ್ ಅಲರ್ಟ್ ಆಗಿದೆ. ಖುದ್ದು ಸ್ಥಳಕ್ಕೆ ಭೇಟಿ ನೀಡಿ ಆರೋಗ್ಯ ಸಮೀಕ್ಷೆ ಕೈಗೊಳ್ಳಲಾಗುತ್ತಿದೆ.
Advertisement
ಡಾ. ದಿವ್ಯಾ ನೇತೃತ್ವದಲ್ಲಿ ಆರೋಗ್ಯ ಸಹಾಯಕಿಯರು ಮತ್ತು ಆಶಾ ಕಾರ್ಯಕರ್ತೆಯರು ಮನೆ ಮನೆಗೆ ಭೇಟಿ ನೀಡಿ ಜನರ ಆರೋಗ್ಯ ತಪಾಸಣೆ ಮಾಡುತ್ತಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದವರನ್ನು ಅಂಬುಲೆನ್ಸ್ ಮೂಲಕ ಆಸ್ಪತ್ರೆಗೆ ದಾಖಲಿಸುತ್ತಿದ್ದಾರೆ. ಕಳೆದ 3 ದಿನಗಳಲ್ಲಿ ಸುಮಾರು 50ಕ್ಕೂ ಅಧಿಕ ಜನರು ವಾಂತಿ, ಭೇದಿಯಿಂದ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇದನ್ನೂ ಓದಿ: ಕಾರಲ್ಲ, ನಾಯಿ ಹೋಗಿ ಬಿದ್ದಿದ್ದರಿಂದ ವೃದ್ಧೆ ಸಾವು: ಶಾಸಕ ದಡೆಸುಗೂರ್
Advertisement
ಹೊಸಪೇಟೆ ನಗರದಲ್ಲಿ 24*7 ಕುಡಿಯುವ ನೀರಿನ ಯೋಜನೆ ಜಾರಿಗೆ ಬಂದು ದಶಕ ಕಳೆದರೂ ಸರ್ಮಪಕವಾಗಿ ಅನುಷ್ಠಾನಗೊಂಡಿಲ್ಲ. ಹಲವೆಡೆ ಹಳೇ ಪೈಪ್‌ನಲ್ಲೇ ನೀರು ಪೂರೈಕೆಯಾಗುತ್ತಿದೆ. ಸ್ಥಳೀಯ ಶಾಸಕ ಹಾಗೂ ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ಅವರ ಜನ ಸಂಪರ್ಕ ಕಚೇರಿ ಮತ್ತು ಹಳೆ ಮನೆ ಪ್ರದೇಶದಲ್ಲೇ ಈ ಘಟನೆ ನಡೆದಿದ್ದು, ನಗರದ ನೀರು ಪೂರೈಕೆಯಲ್ಲಿನ ಅವ್ಯವಸ್ಥೆಗೆ ಹಿಡಿದ ಕನ್ನಡಿ ಎಂದು ಸಾರ್ವಜಕ ವಲಯದಲ್ಲಿ ಭಾರೀ ಟೀಕೆ ವ್ಯಕ್ತವಾಗಿದೆ.
ಹೊಸಪೇಟೆಯಿಂದ ಕೇವಲ 3 ಕಿ.ಮೀ ದೂರದಲ್ಲಿ ತುಂಗಭದ್ರಾ ಜಲಾಶಯ ಇದೆ. ಹೀಗಿದ್ದರೂ ತಾಲೂಕಿಗೆ ಸಮರ್ಪಕ ನೀರು ಪೂರೈಕೆ ಆಗದೇ ಕಳೆದ 3 ದಿನಗಳಿಂದ ವಾರ್ಡ್‌ನ ಹಲವರಿಗೆ ವಾಂತಿ, ಭೇದಿ ಕಾಣಿಸಿಕೊಂಡಿದೆ. ಹೀಗಾಗಿ ನಗರಸಭೆ ಟ್ಯಾಂಕರ್ ಮೂಲಕ ಶುದ್ಧ ನೀರು ಪೂರೈಸಲಾಗುತ್ತಿದೆ. ಇದನ್ನೂ ಓದಿ: ತೀರ್ಥಹಳ್ಳಿಯಲ್ಲಿ ಶಂಕಿತ ಉಗ್ರರ ಮನೆಗಳ ಶೋಧ – ಕಿಮ್ಮನೆ ಬಳಿಯೂ ಮಾಹಿತಿ ಸಂಗ್ರಹ
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k