ಯಾದಗಿರಿ: ಕುಡಿಯುವ ನೀರಿನ ಟ್ಯಾಂಕಿನಲ್ಲಿ ದುಷ್ಕರ್ಮಿಗಳು ಕ್ರಿಮಿನಾಶಕ ಬೆರೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆಯೊಬ್ಬರು ಚಿಕಿತ್ಸೆ ಫಲಿಸದೇ ರಕ್ತವಾಂತಿ ಆಗಿ ಇಂದು ಮೃತಪಟ್ಟಿದ್ದಾರೆ.
ಜಿಲ್ಲೆಯ ಸುರಪುರ ತಾಲೂಕಿನ ಮುದನೂರ ಕೆ ಗ್ರಾಮದಲ್ಲಿ ಬುಧವಾರ ಈ ಘಟನೆ ನಡೆದಿದೆ. ಪಂಪ್ ಆಪರೇಟರ್ ಮೌನೇಶ್ ತಾಯಿ ಹೊನ್ನಮ್ಮ ಚಿಕಿತ್ಸೆ ಫಲಿಸದೇ ರಕ್ತ ವಾಂತಿ ಮಾಡಿಕೊಂಡು ಇಂದು ಮೃತಪಟ್ಟಿದ್ದಾರೆ. ಬುಧವಾರ ತಪಾಸಣೆಗೆಂದು ಕ್ರಿಮಿನಾಶಕ ಬೆರೆಸಿದ ಕುಡಿಯುವ ನೀರು ಕುಡಿದು ಹೊನ್ನಮ್ಮ ಅಸ್ವಸ್ಥಗೊಂಡಿದ್ದರು. ಬಳಿಕ ಅವರನ್ನು ಯಾದಗಿರಿಯ ಕೆಂಬಾವಿಯಲ್ಲಿ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗೆ ಕಲಬುರಗಿಗೆ ಸಾಗಿಸುವ ವೇಳೆ ಮೃತಪಟ್ಟಿದ್ದಾರೆ.
Advertisement
Advertisement
ಕುಡಿಯುವ ನೀರಿಗೆ ದುಷ್ಕರ್ಮಿಗಳು ಬುಧವಾರ ಕ್ರಿಮಿನಾಶಕ ಬೆರೆಸಿದ್ದರು. ಸುರಪುರ ತಾಲೂಕಿನ ಮುದನೂರ ಕೆ ಗ್ರಾಮದ ಹೊರಭಾಗದಲ್ಲಿರುವ ಬಾವಿಯ ನೀರು ಶಾಖಾಪುರ ಹಾಗೂ ತೆಗ್ಗಳ್ಳಿ ಗ್ರಾಮಕ್ಕೆ ಫಿಲ್ಟರ್ ಅಗಿ ಸರಬರಾಜಾಗ್ತಿತ್ತು. ಆದರೆ ಯಾರೋ ಕಿಡಿಗೇಡಿಗಳು ಈ ನೀರಿಗೆ ಭತ್ತದ ಬೆಳೆಗೆ ಸಿಂಪಡಿಸುವ ಕ್ರಿಮಿನಾಶಕ ಬೆರೆಸಿದ್ದರು.
Advertisement
Advertisement
ಈ ನೀರು ಕುಡಿದ ಪಂಪ್ ಆಪರೇಟರ್ ತಾಯಿ ನಾಗಮ್ಮ ಸೇರಿ ಐವರು ಅಸ್ವಸ್ಥರಾಗಿದ್ದು ಕೆಂಬಾವಿ ಆಸ್ಪತ್ರೆಗೆ ದಾಖಲಾಗಿದ್ದರು. ತಕ್ಷಣ ಎಚ್ಚೆತ್ತುಕೊಂಡ ಪಂಪ್ ಆಪರೇಟರ್ ಮೌನೇಶ್ ನೀರು ಪೂರೈಕೆ ಸ್ಥಗಿತಗೊಳಿಸಿ ಗ್ರಾಮದಲ್ಲಿ ಯಾರು ಈ ನೀರು ಕುಡಿಯಬೇಡಿ ಎಂದು ಡಂಗೂರ ಸಾರಿಸಿ ದೊಡ್ಡ ಅನಾಹುತ ತಪ್ಪಿಸಿದ್ದರು. ಸದ್ಯ ಬಾವಿಯ ನೀರು ಖಾಲಿ ಮಾಡಿಸಲಾಗ್ತಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv