– ಸಾಯುತ್ತೇನೆಂದವಳ ಕುಣಿಕೆಯ ಹಗ್ಗ ಎಳೆದು ಕುರ್ಚಿ ತಳ್ಳಿ ಸಾಯಿಸಿದ ಪ್ರಿಯಕರ
ಬೆಂಗಳೂರು: ಅನೈತಿಕ ಸಂಬಂಧ (Illegal Relation) ಹೊಂದಿದ್ದನ್ನು ಪ್ರಶ್ನಿಸಿ ಸಾಯುತ್ತೇನೆ ಎಂದು ಹೆದರಿಸಿದ ಮಹಿಳೆಯ ಕುಣಿಕೆ ಎಳೆದು ಕುರ್ಚಿಯನ್ನು ತಳ್ಳಿದ ಪರಿಣಾಮ ಮಹಿಳೆ ಸಾವನ್ನಪ್ಪಿದ ಘಟನೆ ಬೆಂಗಳೂರಿನ (Bengaluru) ಬಸವೇಶ್ವರನಗರದಲ್ಲಿ (Basaveshwar Nagar) ನಡೆದಿದೆ.
ಸರವಣ (35) ಮೃತ ಮಹಿಳೆ. ಈಕೆಗೆ ಮದುವೆಯಾಗಿ ಎರಡು ಮಕ್ಕಳಿದ್ದರೂ ಸಹ ಗಣೇಶ್ (22) ಎಂಬ ಯುವಕನ ಜೊತೆಗೆ ಅಕ್ರಮ ಸಂಬಂಧ ಹೊಂದಿದ್ದಳು. ಅಷ್ಟೇ ಅಲ್ಲದೇ ಯುವಕನಿಗೆ 50 ಸಾವಿರ ರೂ. ಹಣ ಹಾಗೂ ಒಂದು ಮನೆಯನ್ನೂ ಸಹ ಮಾಡಿಕೊಟ್ಟಿದ್ದಳು. ಇಷ್ಟೆಲ್ಲಾ ಇದ್ದರೂ ಗಣೇಶ್ ಬೇರೆ ಹುಡುಗಿಯೊಂದಿಗೆ ಸಲುಗೆಯನ್ನು ಬೆಳೆಸಿಕೊಂಡಿದ್ದ. ಇದನ್ನು ತಿಳಿದ ಮಹಿಳೆ ಆತನನ್ನು ಮನೆಗೆ ಕರೆಸಿಕೊಂಡಿದ್ದಾಳೆ. ಬಳಿಕ ಆತ ಸಲುಗೆ ಬೆಳೆಸಿಕೊಂಡಿರುವ ಹುಡುಗಿ ಯಾರೆಂದು ಪ್ರಶ್ನಿಸಿದ್ದಾಳೆ. ಅಲ್ಲದೇ ತಾನು ನೀಡಿದ ಹಣವನ್ನು ವಾಪಸ್ ಕೊಡುವಂತೆ ಕೇಳಿದ್ದಾಳೆ. ಇದರಿಂದಾಗಿ ಇವರಿಬ್ಬರ ಮಧ್ಯೆ ಗಲಾಟೆ ನಡೆದಿದೆ. ಇದನ್ನೂ ಓದಿ: ನಕಲಿ ಪಾಸ್‌ಪೋರ್ಟ್ ಬಳಸಿ ವಿದೇಶಕ್ಕೆ ಹಾರಲು ಸಂಚು ರೂಪಿಸಿದ್ದ ಆರೋಪಿ ಅಂದರ್
ಈ ವೇಳೆ ಗಣೇಶ್ ಸಾಯುತ್ತೇನೆ ಎಂದು ಹಗ್ಗದಿಂದ ನೇಣುಬಿಗಿದುಕೊಂಡು ಆತ್ಮಹತ್ಯೆಗೆ (Suicide) ಮುಂದಾಗಿದ್ದ. ಇದನ್ನು ನೋಡಿದ ಮಹಿಳೆ ತಾನೂ ಕೂಡಾ ಸಾಯುವುದಾಗಿ ಕುಣಿಕೆ ಹಾಕಿಕೊಂಡಿದ್ದಾಳೆ. ಈ ವೇಳೆ ಗಣೇಶ್ ಆಕೆಯ ಕುಣಿಕೆಯ ಹಗ್ಗ ಎಳೆದು ಕುರ್ಚಿಯನ್ನು ತಳ್ಳಿದ್ದಾನೆ. ಇದರಿಂದಾಗಿ ಕುಣಿಕೆ ಕುತ್ತಿಗೆಗೆ ಬಿಗಿದು ಮಹಿಳೆ ಸಾವನ್ನಪ್ಪಿದ್ದಾಳೆ. ಇದನ್ನೂ ಓದಿ: ಕುಡಿಯಲು ಹಣ ಕೊಡದಿದ್ದಕ್ಕೆ ಇಟ್ಟಿಗೆಯಿಂದ ತಲೆಗೆ ಹೊಡೆದು ತಂದೆಯನ್ನೇ ಕೊಂದ ಪಾಪಿ ಮಗ
ಈ ಕುರಿತು ಬಸವೇಶ್ವರನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಗಣೇಶ್‌ನನ್ನು ಬಂಧಿಸಲಾಗಿದೆ. ಇದನ್ನೂ ಓದಿ: ಲಿಫ್ಟ್‌ಗೆ ಸಿಲುಕಿ 26ರ ಯುವಕ ಸಾವು