ಬೈಕ್ ಡಿಕ್ಕಿ- ವೃದ್ಧನ ತಲೆಯಲ್ಲಿದ್ದ ದಿನಸಿ ಚೀಲಕ್ಕೆ ಕೈತಾಗಿ ಬಿದ್ದಾಕೆಯ ಮೇಲೆ ಹರಿದ ಬಸ್!

Public TV
1 Min Read
Belagavi Accident

ಬೆಳಗಾವಿ: ನಗರದ ಕೇಂದ್ರ ಬಸ್ ನಿಲ್ದಾಣದ (Bus Stand) ಮುಂಭಾಗದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ ಪರಿಣಾಮ ಮಹಿಳೆ ಸಾವನ್ನಪ್ಪಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಧಾರವಾಡ (Dharwad) ಮೂಲದ ವಿದ್ಯಾಶ್ರೀ (32) ಮೃತ ದುರ್ದೈವಿ. ನಗರದ ಕೇಂದ್ರ ಬಸ್ ನಿಲ್ದಾಣ ರಸ್ತೆ ಪಕ್ಕದಲ್ಲಿ ದಿನಸಿ ಹೊತ್ತು ಹೊರಟಿದ್ದ ವೃದ್ಧನಿಗೆ ಬೈಕ್ ಡಿಕ್ಕಿಯಾಗಿತ್ತು. ಈ ವೇಳೆ ವೃದ್ಧನ ಚೀಲಕ್ಕೆ ಬೈಕ್‌ನಲ್ಲಿ ಕುಳಿತಿದ್ದ ವಿದ್ಯಾಶ್ರೀ ಕೈತಾಗಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಚಕ್ರದಡಿ ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಮದುವೆ ಒಪ್ಪಂದಕ್ಕೆ ಒಪ್ಪದ ಶಿಕ್ಷಕಿಯ ಅಪಹರಣ

ಬೈಕ್ ಸವಾರ ಬಚಾವ್ ಆಗಿದ್ದಾರೆ. ತಲೆಗೆ ಹೆಲ್ಮೆಟ್ ಹಾಕಿದ್ದರಿಂದ ಬಸ್‌ನ ಚಕ್ರ ತಲೆಯ ಮೇಲೆ ಹರಿದಿದೆ. ಅದೃಷ್ಟವಶಾತ್ ಈ ಅಪಘಾತದಲ್ಲಿ ಬೈಕ್ ಸವಾರ ಬದುಕುಳಿದಿದ್ದಾರೆ. ಇದನ್ನೂ ಓದಿ: ಪೊಲೀಸರ ಕಣ್ತಪ್ಪಿಸಲು ಸಿಗರೇಟ್‌ಗೆ ಸೀಕ್ರೆಟ್ ರೂಮ್‌ – ಬ್ರ‍್ಯಾಂಡೆಡ್ ಹೆಸರಿನ ನಕಲಿ ಸಿಗರೇಟ್ ಸೀಜ್..!

ಸಂಬಂಧಿಕರ ಮನೆಗೆ ಬೈಕ್‌ನಲ್ಲಿ ವಿದ್ಯಾಶ್ರೀ ಬಂದಿದ್ದರು. ಎರಡು ದಿನದ ಹಿಂದೆ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಮಾರ್ಕೆಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ರೆಕಾರ್ಡ್ ಆಗಿದೆ. ಇದನ್ನೂ ಓದಿ: ಕೆಳಗೆ ನಿಂತು ಟ್ರ್ಯಾಕ್ಟರ್ ಆನ್ ಮಾಡಿದ ರೈತ – ಮೈಮೇಲೆ ಟ್ರ್ಯಾಕ್ಟರ್ ಹರಿದು ಸಾವು

Share This Article