ಚಿತ್ರದುರ್ಗ: ಚಳ್ಳಕೆರೆಯ (Challakere) ಹೊಟ್ಟೆಪ್ಪನಹಳ್ಳಿ ಮತಗಟ್ಟೆಯಲ್ಲಿ ಚುನಾವಣಾ (Lok sabha Elections 2024) ಕರ್ತವ್ಯದಲ್ಲಿದ್ದ ಮಹಿಳಾ ಸಿಬ್ಬಂದಿಯೊಬ್ಬರು ಲೋ ಬಿಪಿಯಿಂದ ಮೃತಪಟ್ಟಿದ್ದಾರೆ.
ಚಳ್ಳಕೆರೆ (Challakere) ಪಟ್ಟಣದ ವಿಠಲ ನಗರದ ಯಶೋಧಮ್ಮ (55) ಮೃತ ಮಹಿಳಾ ಸಿಬ್ಬಂದಿ. ಯಶೋದಮ್ಮ ಅವರು ಕರ್ತವ್ಯದ ವೇಳೆ ಮತಗಟ್ಟೆಯಲ್ಲಿ ಲೋ ಬಿಪಿಯಿಂದಾಗಿ ಅಸ್ವಸ್ಥಗೊಂಡು ಕುಸಿದು ಬಿದ್ದಿದ್ದಾರೆ. ಅವರನ್ನು ತಕ್ಷಣ ಚಳ್ಳಕೆರೆ ಆಸ್ಪತ್ರೆಗೆ ಸಾಗಿಸಲಾಯಿತು, ಆದರೆ ಅವರು ದಾರಿ ಮಧ್ಯೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಇದನ್ನೂ ಓದಿ: ನೋಟಾಗಿಂತ ಕಡಿಮೆ ಮತ ಪಡೆದ ಅಭ್ಯರ್ಥಿಗಳನ್ನು ನಿಷೇಧಿಸಿ, ಮರು ಚುನಾವಣೆಗೆ ನಿರ್ದೇಶನ ಕೋರಿ ಅರ್ಜಿ
ಚಳ್ಳಕೆರೆ ಆಸ್ಪತ್ರೆಗೆ ಅಪರ ಜಿಲ್ಲಾಧಿಕಾರಿ ಕುಮಾರಸ್ವಾಮಿ ಭೇಟಿ ನೀಡಿದ್ದಾರೆ. ಚಳ್ಳಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಇದನ್ನೂ ಓದಿ: ಮತ ಹಾಕಲು ಬಂದಾಗ ಹೃದಯ ಸ್ತಂಭನ- ಮಹಿಳೆಯ ಪ್ರಾಣ ಉಳಿಸಿದ ವೈದ್ಯರು