ಬೆಂಗಳೂರು: ಬಿಎಂಟಿಸಿ ಬಸ್ (BMTC Bus) ಡಿಕ್ಕಿಯಾಗಿ (Accident) ಮಹಿಳೆಯೊಬ್ಬರು ಸಾವಿಗೀಡಾದ ಘಟನೆ ಹೆಬ್ಬಾಳ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಮೃತ ಮಹಿಳೆಯನ್ನು ನಾಗೇನಹಳ್ಳಿ ನಿವಾಸಿ ಲಿಂಗಮ್ಮ ಎಂದು ಗುರುತಿಸಲಾಗಿದೆ. ಮಹಿಳೆ ಬಸ್ ಇಳಿದು ರಸ್ತೆ ದಾಟುವ ವೇಳೆ, ವೇಗವಾಗಿ ಬಂದಿದ್ದ ಬಿಎಂಟಿಸಿ ಬಸ್ ಡಿಕ್ಕಿಯಾಗಿತ್ತು. ಪರಿಣಾಮ ಮಹಿಳೆ ಗಂಭಿರವಾಗಿ ಗಾಯಗೊಂಡಿದ್ದರು.
Advertisement
Advertisement
ಚಿಕಿತ್ಸೆಗಾಗಿ ಮಹಿಳೆಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಅವರು ಸಾವನ್ನಪ್ಪಿದ್ದಾರೆ.
Advertisement
Advertisement
ಈ ಸಂಬಂಧ ಹೆಬ್ಬಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.