ಹಾಸನ: ಮಕ್ಕಳು ಅಳುತ್ತಿದ್ದಾರೆ ಎಂದು ಚಾಕ್ಲೇಟ್ ತರಲು ಅಂಗಡಿಗೆ ತೆರಳುತ್ತಿದ್ದ ಮಹಿಳೆಗೆ ಕಾರು ಡಿಕ್ಕಿಯಾಗಿ (Accident) ಸಾವನ್ನಪ್ಪಿದ ಧಾರುಣ ಘಟನೆ ಸಕಲೇಶಪುರದ (Sakleshpura) ಬಾಳ್ಳುಪೇಟೆಯ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ನಡೆದಿದೆ.
ಮೃತ ಮಹಿಳೆಯನ್ನು ಹಲಸುಲಿಗೆ ಗ್ರಾಮದ ಗುಲಾಬಿ ಎಂದು ಗುರುತಿಸಲಾಗಿದೆ. ಮಹಿಳೆ ಡಿವೈಡರ್ ದಾಟಿ ರಸ್ತೆಗಿಳಿಯುತ್ತಿದ್ದಂತೆ ಇನ್ನೋವಾ ಕಾರು ಡಿಕ್ಕಿಯಾಗಿದೆ. ಪರಿಣಾಮ ಮಹಿಳೆ ಸುಮಾರು 10 ಅಡಿ ದೂರ ಹಾರಿ ಬಿದ್ದು ಮೃತಪಟ್ಟಿದ್ದಾಳೆ. ಇದನ್ನೂ ಓದಿ: ಬೆಂಗ್ಳೂರಲ್ಲಿ 5 ಕೋಟಿ ಮೌಲ್ಯದ ಮಾದಕ ವಸ್ತು ವಶ – ಇಬ್ಬರು ಅರೆಸ್ಟ್
- Advertisement3
ಮಹಿಳೆಗೆ ಡಿಕ್ಕಿ ಹೊಡೆದ ಬಳಿಕ ಕಾರು ಚಾಲಕ ಕಾರನ್ನು ನಿಲ್ಲಿಸದೆ ಅಮಾನವೀಯ ವರ್ತನೆ ತೋರಿದ್ದಾನೆ. ಅಪಘಾತದ ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕಾರಿನ ನಂಬರ್ ಸಹ (ಕೆಎ-05-ಎಎಚ್-0576) ಪತ್ತೆಯಾಗಿದೆ.
- Advertisement
ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಅನಿರ್ದಿಷ್ಟಾವಧಿ ಲಾರಿ ಮುಷ್ಕರ | ರಸ್ತೆಗಿಳಿಯದ ಲಾರಿಗಳು – ಯಾವೆಲ್ಲಾ ಸೇವೆಯಲ್ಲಿ ವ್ಯತ್ಯಯ?