– 5 ದಿನದಲ್ಲಿ ಬಿಎಂಟಿಸಿಗೆ 2 ಬಲಿ
ಬೆಂಗಳೂರು: ಬೈಕ್‌ಗೆ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ರೇಷ್ಮೆ ಸಂಸ್ಥೆ ಮೆಟ್ರೋ ಸ್ಟೇಷನ್ ಬಳಿ ನಡೆದಿದೆ.
ಕೆಆರ್ ಮಾರ್ಕೆಟ್‌ನಿಂದ ಹಂಚಿಪುರ ಕಾಲೋನಿಗೆ ಹೋಗುತ್ತಿದ್ದ ಬಸ್, ಬೈಕ್‌ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಹಿಂಬದಿ ಕುಳಿತಿದ್ದ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದು, ಬೈಕ್ ಸವಾರ ಗಂಭೀರ ಗಾಯಗೊಂಡಿದ್ದಾನೆ. ಇದನ್ನೂ ಓದಿ: ಬಾಗಲಕೋಟೆ | ಸಹೋದರನ 3 ವರ್ಷದ ಮಗುವನ್ನು ಕತ್ತು ಸೀಳಿ ಕೊಂದ ಪಾಪಿ
ಈ ವೇಳೆ ಸಾರ್ವಜನಿಕರು ಬಸ್ ಸಿಬ್ಬಂದಿ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ. ಡ್ರೈವರ್ ಹಾಗೂ ಕಂಡಕ್ಟರ್ ಬಸ್ ಬಿಟ್ಟು ಸ್ಥಳದಿಂದ ಪರಾರಿಯಾಗಿದ್ದಾರೆ. ತಲಘಟ್ಟಪುರ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಇದನ್ನೂ ಓದಿ: ಬಾಲಕಿಗೆ ಪಾಗಲ್ ಪ್ರೇಮಿ ಲವ್ ಟಾರ್ಚರ್ – ಜನರ ಎದುರೇ ಹುಡುಗಿ ಕುತ್ತಿಗೆಗೆ ಚಾಕು ಹಿಡಿದು ಬೆದರಿಕೆ
ಇದೀಗ ಐದು ದಿನದಲ್ಲಿ ಬಿಎಂಟಿಸಿಗೆ ಇಬ್ಬರು ಬಲಿಯಾಗಿದ್ದಾರೆ. ಕಳೆದ ಶುಕ್ರವಾರ ಪೀಣ್ಯ 2ನೇ ಹಂತದಲ್ಲಿ ಎಲೆಕ್ಟ್ರಿಕ್ ಬಸ್ ಡಿಕ್ಕಿಯಾಗಿ 25 ವರ್ಷದ ಸುಮಾ ಮೃತಪಟ್ಟಿದ್ದರು. ಇಂದು ಮತ್ತೊಂದು ಬಿಎಂಟಿಸಿ ಬಸ್ ಡಿಕ್ಕಿಯಾಗಿ ಮಹಿಳೆ ಮೃತಪಟ್ಟಿದ್ದಾರೆ.