ನವದೆಹಲಿ: ಯುವತಿಯೊಬ್ಬಳ ಸ್ಕೂಟರ್ (Scooter) ಅಪಘಾತಕ್ಕೀಡಾಗಿದ್ದು, ಆಕೆಯನ್ನು ಕಾರು (Car) 12 ಕಿ.ಮೀವರೆಗೂ ಎಳೆದೊಯ್ದಿದ್ದು, ಪರಿಣಾಮ ಯುವತಿ (Woman) ಸಾವನ್ನಪ್ಪಿದ ಘಟನೆ ದೆಹಲಿಯಲ್ಲಿ ನಡೆದಿದೆ.
ಅಮನ್ ವಿಹಾರ್ ನಿವಾಸಿ ಅಂಜಲಿ (20) ಮೃತ ಯುವತಿ. ದೆಹಲಿಯ (New Delhi) ಸುಲ್ತಾನ್ಪುರಿಯಲ್ಲಿ ಇಂದು ಬೆಳಗ್ಗೆ ಹೊಸ ವರ್ಷಾಚರಣೆ ಆರಂಭವಾದ ಕೆಲವೇ ಗಂಟೆಗಳಲ್ಲಿ ಈ ಘಟನೆ ನಡೆದಿದೆ. ಅಂಜಲಿ ಚಲಿಸುತ್ತಿದ್ದ ಸ್ಕೂಟಿಯು ಕಾರಿಗೆ ಡಿಕ್ಕಿ ಹೊಡೆದಿದೆ. ಈ ವೇಳೆ ಕಾರಿನ ಚಕ್ರಕ್ಕೆ ಆಕೆ ಸಿಕ್ಕಿ ಹಾಕಿಕೊಂಡಿದ್ದಾರೆ. ಆದರೂ ಕಾರು 10-12 ಕಿ.ಮೀ ದೂರ ಕ್ರಮಿಸಿದೆ.
Advertisement
Advertisement
ಇದನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಕರೆ ಮಾಡಿ ಕಾರೊಂದು ಶವವನ್ನು ಎಳೆದುಕೊಂಡು ಹೋಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ. ಅದಾದ ಒಂದು ಗಂಟೆಯ ನಂತರ ರಸ್ತೆಯಲ್ಲಿ ಮಹಿಳೆಯ ಶವ ಬಿದ್ದಿರುವ ಬಗ್ಗೆ ಪೊಲೀಸರಿಗೆ ಮತ್ತೊಂದು ಕರೆ ಬಂದಿದೆ. ಅದಾದ ಬಳಿಕ ಪೊಲೀಸರು ಸ್ಥಳಕ್ಕೆ ನೀಡಿ ಪರಿಶೀಲನೆ ನಡೆಸಿದ್ದು, ವಾಹನಕ್ಕಾಗಿ ಹುಡುಕಾಟ ಪ್ರಾರಂಭಿಸಿದ್ದಾರೆ.
Advertisement
ಈ ವೇಳೆ ನೋಂದಾಯಿತ ಕಾರಿನ ಸಂಖ್ಯೆಯ ಆಧಾರದ ಮೇಲೆ ಆರೋಪಿಗಳನ್ನು ಪತ್ತೆ ಹಚ್ಚಿ, ಘಟನೆಗೆ ಸಂಬಂಧಿಸಿ ಮಾರುತಿ ಸುಜುಕಿ ಬಲೆನೊ ಕಾರಿನಲ್ಲಿದ್ದ ಐವರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರಲ್ಲಿ ಕ್ರೆಡಿಟ್ ಕಾರ್ಡ್ ಸಂಗ್ರಹ ಏಜೆಂಟ್, ಚಾಲಕ ಹಾಗೂ ಪಡಿತರ ಅಂಗಡಿ ಮಾಲೀಕರಿದ್ದಾರೆ. ಇದನ್ನೂ ಓದಿ: ಸೆಲ್ಫಿ ತೆಗೆದುಕೊಳ್ಳಲು ಮಹಿಳೆಯರಿಗೆ ಒತ್ತಾಯ- 2 ಗುಂಪುಗಳ ನಡುವೆ ಮಾರಾಮಾರಿ
Advertisement
दिल्ली के कंझावला में एक लड़की की नग्न अवस्था में लाश मिली, बताया जा रहा है कि कुछ लड़कों ने नशे की हालत में गाड़ी से उसकी स्कूटी को टक्कर मारी और उसे कई किलोमीटर तक घसीटा।
ये मामला बेहद भयानक है, मैं दिल्ली पुलिस को हाज़िरी समन जारी कर रही हूँ। पूरा सच सामने आना चाहिए।
— Swati Maliwal (@SwatiJaiHind) January 1, 2023
ಘಟನೆಯ ಕುರಿತು ಆರೋಪಿಗಳನ್ನು ವಿಚಾರಣೆ ನಡೆಸಿದಾಗ, ಕಾರು ಸ್ಕೂಟಿಗೆ ಡಿಕ್ಕಿಯಾಗಿದೆ ಎಂಬುದನ್ನು ತಿಳಿಸಿದ್ದಾರೆ. ಆದರೆ ಹಲವಾರು ಕಿ.ಮೀಗಳವರೆಗೂ ಕ್ರಮಿಸಿದರೂ ಕಾರಿನ ಕೆಳಗೆ ಮಹಿಳೆ ಶವ ಇದೆ ಎನ್ನವುದು ತಿಳಿದಿರಲಿಲ್ಲ ಎಂದು ವಿಚಾರಣೆ ವೇಳೆ ತಿಳಿಸಿದ್ದಾರೆ. ಅಷ್ಟೇ ಅಲ್ಲದೇ ಕಾರಿನಲ್ಲಿದ್ದ ಆರೋಪಿಗಳು ಕುಡಿದಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಕಾಬೂಲ್ ಮಿಲಿಟರಿ ವಿಮಾನ ನಿಲ್ದಾಣದಲ್ಲಿ ಸ್ಫೋಟ – 10 ಮಂದಿ ಸಾವು