ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ (Bengaluru) ಭಾನುವಾರ ಸುರಿದ ಮಹಾಮಳೆಗೆ ಕಾಂಪೌಂಡ್ ಗೋಡೆ ಕುಸಿದು ಸಾವನ್ನಪ್ಪಿದ ಮಹಿಳೆ ಕುಟುಂಬಕ್ಕೆ ರಾಜ್ಯ ಸರ್ಕಾರದಿಂದ 5 ಲಕ್ಷ ರೂ. ಪರಿಹಾರ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಘೋಷಣೆ ಮಾಡಿದರು.
ಬೆಂಗಳೂರಿನಲ್ಲಿ ಮಳೆ ಹಾನಿ (RainFall) ಪ್ರದೇಶಗಳು ಮತ್ತು ಅನಾಹುತಗಳ ಬಗ್ಗೆ ವಾರ್ ರೂಮ್‌ನಲ್ಲೇ ಅಧಿಕಾರಿಗಳಿಂದ ಮಾಹಿತಿ ಪಡೆದ ಬಳಿಕ ಸಿಎಂ ಮತ್ತು ಡಿಸಿಎಂ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು. ಈ ವೇಳೆ 5 ಲಕ್ಷ ರೂ. ಪರಿಹಾರ ನೀಡುವುದಾಗಿ ಘೋಷಣೆ ಮಾಡಿದರು. ಇದನ್ನೂ ಓದಿ: ಕೇಂದ್ರದಿಂದ 4,195 ಕೋಟಿ ಅನುದಾನ ಬಾಕಿ; ಸಿಎಂ ಬೂಟಾಟಿಕೆ ಪ್ರದರ್ಶನ – ಜೋಶಿ ವಾಗ್ದಾಳಿ
ಶಶಿಕಲಾ (35) ಮೃತ ಮಹಿಳೆ. ಇಂದು ಬೆಳಗ್ಗೆ ವೈಟ್ ಫೀಲ್ಡ್‌ನ ಖಾಸಗಿ ಕಂಪನಿಯಲ್ಲಿ ಹೌಸ್ ಕೀಪಿಂಗ್ ಕೆಲಸಕ್ಕೆ ಹೋದಾಗ ದುರ್ಘಟನೆ ನಡೆದಿದೆ. ಇದನ್ನೂ ಓದಿ: ರಾಯಚೂರು | ಭಾರೀ ಮಳೆಗೆ ಟಿನ್ ಶೆಡ್ ಮನೆ ಕುಸಿದು ಮೂವರಿಗೆ ಗಾಯ
ಕೆಲಸದ ಸ್ಥಳದಲ್ಲಿದ್ದ ಕಾಂಪೌಂಡ್ ಗೋಡೆ ಕುಸಿದು ಶಶಿಕಲಾ ಸಾವನ್ನಪ್ಪಿದ್ದಾರೆ. ಇಡೀ ರಾತ್ರಿ ಮಳೆಗೆ ಗೋಡೆ ನೆನೆದಿದ್ದರಿಂದ ಕುಸಿದು ಶಶಿಕಲಾ ಮೇಲೆ ಬಿದ್ದಿದೆ, ಪರಿಣಾಮ ಶಶಿಕಲಾ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ನಂತರ ವೈಟ್‌ಫೀಲ್ಡ್ ಪೊಲೀಸರು ಮೃತದೇಹವನ್ನ ಆಸ್ಪತ್ರೆಗೆ ರವಾನಿಸಿದ್ದಾರೆ. ಯಾದಗಿರಿಯ ಶಹಾಪುರ ಮೂಲದ ಶಶಿಕಲಾ ಕಳೆದ ಕೆಲವು ವರ್ಷಗಳಿಂದ ಬೆಂಗಳೂರಿನಲ್ಲಿ ವಾಸಿಸುತ್ತಿದ್ದರು. ಮೃತ ಶಶಿಕಲಾಗೆ ಇಬ್ಬರು ಪುಟ್ಟ ಮಕ್ಕಳಿದ್ದು, ಗಂಡ ಕೂಡ ಕೂಲಿ ಕೆಲಸ ಮಾಡುತ್ತಿದ್ದರು. ಇದನ್ನೂ ಓದಿ: ಬೆಂಗ್ಳೂರಲ್ಲಿ ಮಳೆಗೆ ನಾನಾ ಅವಾಂತರ | ಅಂತರಾಷ್ಟ್ರೀಯ ಮಟ್ಟದಲ್ಲಿ ತಲೆ ತಗ್ಗಿಸುವಂತಾಗಿದೆ: ಸಿ.ಟಿ ರವಿ