ಬೆಂಗಳೂರಿನ ಮಹಾಮಳೆಗೆ ಕಾಂಪೌಂಡ್ ಗೋಡೆ ಕುಸಿದು ಮಹಿಳೆ ಸಾವು

Public TV
1 Min Read
Bengaluru Mahadevapura Woman Death Compound Collapse

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಭಾನುವಾರ ಸುರಿದ ಮಹಾಮಳೆಗೆ ಕಾಂಪೌಂಡ್ ಗೋಡೆ ಕುಸಿದು ಮಹಿಳೆ (Woman) ಸಾವನ್ನಪ್ಪಿದ ಘಟನೆ ಮಹದೇವಪುರದ (Mahadevapura) ಚನ್ನಸಂದ್ರದಲ್ಲಿ ನಡೆದಿದೆ.

ಶಶಿಕಲಾ (35) ಮೃತ ಮಹಿಳೆ. ಇಂದು ಬೆಳಗ್ಗೆ ವೈಟ್ ಫೀಲ್ಡ್‌ನ ಖಾಸಗಿ ಕಂಪನಿಯಲ್ಲಿ ಹೌಸ್ ಕೀಪಿಂಗ್ ಕೆಲಸಕ್ಕೆ ಹೋದಾಗ ದುರ್ಘಟನೆ ನಡೆದಿದೆ. ಕೆಲಸದ ಸ್ಥಳದಲ್ಲಿದ್ದ ಕಾಂಪೌಂಡ್ ಗೋಡೆ ಕುಸಿದು ಶಶಿಕಲಾ ಸಾವನ್ನಪ್ಪಿದ್ದಾರೆ. ಇಡೀ ರಾತ್ರಿ ಮಳೆಗೆ ಗೋಡೆ ನೆನೆದಿದ್ದರಿಂದ ಕುಸಿದು ಶಶಿಕಲಾ ಮೇಲೆ ಬಿದ್ದಿದೆ. ಘಟನೆಯ ಪರಿಣಾಮ ಶಶಿಕಲಾ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: Bengaluru Rain | ನಾನು ನಿಮ್ಮಲ್ಲಿ ಒಬ್ಬ, ನಿಮ್ಮೊಂದಿಗೆ ನಿಲ್ಲುತ್ತೇನೆ: ಡಿಕೆಶಿ

ಸದ್ಯ ವೈಟ್‌ಫೀಲ್ಡ್ ಪೊಲೀಸರು ಮೃತದೇಹವನ್ನು ಆಸ್ಪತ್ರೆಗೆ ರವಾನಿಸಿದ್ದಾರೆ. ಯಾದಗಿರಿಯ ಶಹಾಪುರ ಮೂಲದ ಶಶಿಕಲಾ ಕಳೆದ ಕೆಲವು ವರ್ಷಗಳಿಂದ ಬೆಂಗಳೂರಿನಲ್ಲಿ ವಾಸಿಸುತ್ತಿದ್ದರು. ಮೃತ ಶಶಿಕಲಾಗೆ ಇಬ್ಬರು ಸಣ್ಣ ಮಕ್ಕಳಿದ್ದು, ಗಂಡ ಕೂಡ ಕೂಲಿ ಕೆಲಸ ಮಾಡುತ್ತಿದ್ದರು. ಘಟನಾ ಸ್ಥಳಕ್ಕೆ ಮಹದೇವಪುರ ಪೊಲೀಸರು, ಡಿಸಿಪಿ ಶಶಿಕುಮಾರ್ ಗುಣಾರೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: Ramanagara | 2 ಬೈಕ್‌ಗಳಿಗೆ ಗುದ್ದಿ ಹಳ್ಳಕ್ಕೆ ಬಿದ್ದ KSRTC ಬಸ್ – ಸಬ್ ಇನ್ಸ್‌ಪೆಕ್ಟರ್ ಸಾವು

Share This Article