ಚಿಕ್ಕಬಳ್ಳಾಪುರ: ನಿರ್ಮಾಣ ಹಂತದ ನ್ಯಾಯಾಲಯ ಕಟ್ಟಡದ ಕಿಟಕಿಯ ಸಜ್ಜಾ ಕುಸಿದ ಪರಿಣಾಮ ಮಹಿಳೆ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ನಗರದಲ್ಲಿ ನಡೆದಿದೆ.
ಆಂಧ್ರ ಮೂಲದ ರಾಜೇಶ್ವರಿ (35) ಮೃತ ಕೂಲಿ ಕಾರ್ಮಿಕ ಮಹಿಳೆ. ಚಿಕ್ಕಬಳ್ಳಾಪುರ ನಗರದ ಜಿಲ್ಲಾ ಸತ್ರ ನ್ಯಾಯಾಲಯದ ಕೂಗಳತೆ ದೂರದಲ್ಲೇ ಮತ್ತೊಂದು ನೂತನ ನ್ಯಾಯಾಲಯ ಸಂಕೀರ್ಣದ ನಿರ್ಮಾಣ ಕಾರ್ಯ ಭರದಿಂದ ಸಾಗಿದೆ. ಆದರೆ ಇಂದು ಈ ನೂತನ ಕಟ್ಟಡದ ಬೃಹತ್ ಗಾತ್ರದ ಕಿಟಕಿಯ ಸಿಮೆಂಟ್ ಸಜ್ಜಾ ಕುಸಿದಿದ್ದು, ಪರಿಣಾಮ ಅಲ್ಲೇ ಕೆಲಸ ಮಾಡುತ್ತಿದ್ದ ರಾಜೇಶ್ವರಿ ಮೃತಪಟ್ಟಿದ್ದಾರೆ.
Advertisement
Advertisement
ಈ ಘಟನೆಯಲ್ಲಿ ಉಮಾದೇವಿ ಎಂಬ ಯುವತಿ ಸಹ ಗಾಯಗೊಂಡಿದ್ದು, ಕಾರ್ಮಿಕರಾದ ಈರೇಶ್, ಉಲ್ಲೇಶ ಎಂಬವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸದ್ಯ ಮೂವರು ಗಾಯಾಳುಗಳನ್ನ ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಈ ಘಟನೆಗೆ ಗುತ್ತಿಗೆದಾರ ಹಾಗೂ ಎಂಜಿನಿಯರ್ ಗಳ ನಿರ್ಲಕ್ಷ್ಯವೇ ಕಾರಣ ಅನ್ನೋದು ಮೇಲ್ನೋಟಕ್ಕೆ ಗೊತ್ತಾಗುತ್ತಿದೆ.
Advertisement
ಅವೈಜ್ಞಾನಿಕವಾಗಿ ಬೃಹತ್ ಗಾತ್ರದ ಕಿಟಕಿಗಳಿಗೆ ಸಜ್ಜಾ ನಿರ್ಮಾಣ ಮಾಡಲು ಮುಂದಾಗಿರುವುದು ಅವಘಡಕ್ಕೆ ಕಾರಣ ಅಂತ ಅಂದಾಜಿಸಲಾಗುತ್ತಿದೆ. ಈ ಘಟನೆ ಚಿಕ್ಕಬಳ್ಳಾಪುರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv