ಬೆಂಗಳೂರು: ಒಣ ಹಾಕಿದ್ದ ಬಟ್ಟೆ ತೆಗೆಯಲು ಹೋಗಿ ಕಟ್ಟಡದ 4ನೇ ಮಹಡಿಯಿಂದ ಬಿದ್ದು ಮಹಿಳೆ (Woman) ಸಾವನ್ನಪ್ಪಿರುವ ಘಟನೆ ಬೆಂಗಳೂರು ಹೊರವಲಯದ ಆನೇಕಲ್ (Anekal) ಪಟ್ಟಣದ ಸಿಪಾಯಿಗಲ್ಲಿಯಲ್ಲಿ ನಡೆದಿದೆ.
ಭುವನೇಶ್ವರಿ (49) ಮೃತ ಮಹಿಳೆ. ಇತ್ತೀಚೆಗೆ ಖಿನ್ನತೆಗೆ ಒಳಗಾಗಿ ಮಾನಸಿಕ ಅಸ್ವಸ್ಥರಾಗಿದ್ದ ಭುವನೇಶ್ವರಿ ಸಂಜೆ ಹೊರಗೆ ಹಾಕಿದ್ದ ಬಟ್ಟೆ ತೆಗೆದುಕೊಳ್ಳಲು ಹೋದಾಗ ಅವಘಡ ಸಂಭವಿಸಿದೆ. ಬಿಲ್ಡಿಂಗ್ ಮೇಲಿಂದ ಬಿದ್ದು ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ನ.1ಕ್ಕೆ ರಾಮಲೀಲಾ ಮೈದಾನದಲ್ಲಿ ಬೃಹತ್ ಸಮಾವೇಶ – ಕಠಿಣ ಷರತ್ತು ವಿಧಿಸಿ ಅನುಮತಿ ನೀಡಿದ ದೆಹಲಿ ಪೊಲೀಸರು
ಸದ್ಯ ಮಹಿಳೆಯ ಮೃತದೇಹವನ್ನು ಆನೇಕಲ್ ಸರ್ಕಾರಿ ಆಸ್ಪತ್ರೆಯ ಶವಗಾರಕ್ಕೆ ರವಾನಿಸಲಾಗಿದೆ. ಘಟನೆ ಸಂಬಂಧ ಆನೇಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಟೋಲ್ ಪ್ಲಾಜಾ ಸಮೀಪದ ನಿವಾಸಿಗಳಿಗೆ ವಿಶೇಷ ವಾರ್ಷಿಕ ಪಾಸ್
