ಮಂಡ್ಯ: ಪಾಂಡವಪುರ (Pandavapura) ಹೆಣ್ಣು ಭ್ರೂಣ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಆತಂಕಕಾರಿ ವಿಚಾರ ಹೊರಬಿದ್ದಿದೆ. ರಹಸ್ಯ ಗರ್ಭಪಾತ ಮಾಡಿಸಿಕೊಂಡಿದ್ದ ಮಹಿಳೆಯೊಬ್ಬರು ಸಾವನ್ನಪ್ಪಿ, ಮತ್ತೊಬ್ಬರು ಅಸ್ವಸ್ಥಗೊಂಡ ವಿಚಾರ ತಿಳಿದು ಬಂದಿದೆ.
ಕೆಆರ್‌ನಗರ ಮೂಲದ ಇಬ್ಬರು ಮಹಿಳೆಯರು ಗರ್ಭಪಾತ (Illegal Abortion) ಬಳಿಕ ತೀವ್ರ ಅಸ್ವಸ್ಥಗೊಂಡಿದ್ದಾರೆ. ಬೇರೆ ಆಸ್ಪತ್ರೆಯಲ್ಲಿ (Hospital) ಚಿಕಿತ್ಸೆ ಪಡೆಯಲು ಭಯಪಟ್ಟು ಗರ್ಭಪಾತ ಮಾಡಿಸಿಕೊಂಡಿದ್ದ ಪಾಂಡವಪುರಕ್ಕೆ ಮಹಿಳೆಯರು ಬಂದಿದ್ದಾರೆ. ಗರ್ಭಪಾತ ಮಾಡಿದ್ದ ಶುಶ್ರೂಷಕಿ ಪಾಂಡವಪುರ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಬಳಿಕ ಮಹಿಳೆಯರು ತೀವ್ರ ಅಸ್ವಸ್ಥ ಕಾರಣ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಓರ್ವ ಮಹಿಳೆ ಸಾವನ್ನಪಿದ್ದು, ಮತ್ತೊಬ್ಬರು ಗುಣಮುಖರಾಗಿದ್ದಾರೆ. ಇದನ್ನೂ ಓದಿ: ವಾಲ್ಮಿಕಿ ನಿಗಮದ ಹಣ ಐಟಿ ಕಂಪನಿ ಖಾತೆಗೆ ಅಕ್ರಮ ವರ್ಗಾವಣೆ!
ಗರ್ಭಪಾತ ಬಳಿಕ ಸರಿಯಾದ ಆರೈಕೆ ಇಲ್ಲದೆ ಮಹಿಳೆಯರು ಅನಾರೋಗ್ಯಕ್ಕೆ ಒಳಗಾಗಿದ್ದರು. ನಂತರ ಸಮರ್ಪಕ ವೈದ್ಯಕೀಯ ಚಿಕಿತ್ಸೆ ಸಿಗದೆ ಮಹಿಳೆಯರು ತೀವ್ರ ಅಸ್ವಸ್ಥಗೊಂಡಿದ್ದರು. ಈಕಾರಣಕ್ಕೆ ಮಹಿಳೆ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗುತ್ತಿದೆ.