ನವದೆಹಲಿ: ಮೆಟ್ರೋ ರೈಲಿನಡಿಗೆ ಬಿದ್ದು ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಷ್ಟ್ರ ರಾಜಧಾನಿ ದೆಹಲಿಯ ಜೋರ್ ಬಾಗ್ ಮೆಟ್ರೋ ನಿಲ್ದಾಣದಲ್ಲಿ ನಡೆದಿದೆ.
Advertisement
ದೆಹಲಿಯ ಜೋರ್ ಬಾಗ್ ಮೆಟ್ರೋ ನಿಲ್ದಾಣದಲ್ಲಿ ಮಹಿಳೆ ಪ್ಲಾಟ್ ಫಾರ್ಮ್‍ನಲ್ಲಿ ನಿಂತುಕೊಂಡಿದ್ದರು. ಮೆಟ್ರೋ ಚಲಿಸಲು ಆರಂಭಿಸುತ್ತಿದ್ದಂತೆ ಮಹಿಳೆ ಟ್ರ್ಯಾಕ್‍ಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೆಟ್ರೋ ರೈಲು ಹುಡಾ ಸಿಟಿ ಸೆಂಟರ್ ಕಡೆ ತೆರಳುತ್ತಿತ್ತು. ಘಟನೆಯ ಬಳಿಕ ಕೂಡಲೇ ಮಹಿಳೆಯನ್ನು ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ಅಷ್ಟೊತ್ತಿಗಾಗಲೇ ಮೃತಪಟ್ಟಿದ್ದರು ಎಂದು ವೈದ್ಯರು ತಿಳಿಸಿದ್ದಾರೆ. ಇದನ್ನೂ ಓದಿ: ಮಿಗ್ 29 ಬದಲಿಸಲು ಮಲೇಷ್ಯಾದ ಮೊದಲ ಆಯ್ಕೆ ಭಾರತದ ತೇಜಸ್
Advertisement
ಮಹಿಳೆಯ ಬ್ಯಾಗ್‍ನಲ್ಲಿ ಡೆತ್‍ನೋಟ್ ಪತ್ತೆಯಾಗಿದೆ. ಮಹಿಳೆಯ ಗುರುತು ಪತ್ತೆಗಾಗಿ ಪೊಲೀಸರು ತೊಡಗಿದ್ದು, ಬಳಿಕ ಆಸ್ಪತ್ರೆಯಿಂದ ಮಹಿಳೆಯ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲು ನಿರ್ಧರಿಸಿದ್ದಾರೆ.
Advertisement
Yellow Line Update
Delay in services from Central Secretariat to Green Park due to a passenger on track at Jor Bagh.
Normal service on all other lines.
— Delhi Metro Rail Corporation I कृपया मास्क पहनें???? (@OfficialDMRC) July 4, 2022
Advertisement
ಘಟನೆಯ ಬಳಿಕ ಮೆಟ್ರೋ ಸೇವೆಯಲ್ಲಿ ವ್ಯತ್ಯಾಸ ಕಂಡುಬಂದಿದ್ದು, ಈ ಬಗ್ಗೆ ಮೆಟ್ರೋ ಅಧಿಕಾರಿಗಳು ಜನಸಾಮಾನ್ಯರಿಗೆ ಟ್ವಿಟ್ಟರ್ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಪಿಎಸ್‌ಐ ಅಕ್ರಮ -ADGP ಅಮೃತ್ ಪೌಲ್ ಅರೆಸ್ಟ್