Saturday, 25th May 2019

Recent News

ಲಾರಿ, ಕಾರು ಮುಖಾಮುಖಿ ಡಿಕ್ಕಿ – ಮಹಿಳೆ ಸಾವು, ಮೂವರು ಗಂಭೀರ

ಕಾರವಾರ: ಲಾರಿ ಹಾಗೂ ಕಾರು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲಿಯೇ ಓರ್ವ ಮಹಿಳೆ ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಮುದಗಾ ಬಳಿ ನಡೆದಿದೆ.

ಶಾಫಿಯಾ ಮಹಮ್ಮದ್ ಸಯ್ಯದ್ (65)ಮೃತ ಮಹಿಳೆ. ಎರಡು ವರ್ಷದ ಮಗು, ಓಮ್ನಿ ಚಾಲಕ ಜುಬೇರ್ ಮತ್ತು ಮೀನಾಕ್ ಬೋಪೆರ್ ಗಾಯಗೊಂಡಿದ್ದು, ಗಾಯಾಳುಗಳನ್ನು ಕೂಡಲೇ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ. ಇದನ್ನೂ ಓದಿ: 2020ರಿಂದ ಮಾರುತಿ ಓಮ್ನಿ ಕಾರು ಉತ್ಪಾದನೆ ಸ್ಥಗಿತ

ಶಾಫಿಯಾ ಮಹಮ್ಮದ್ ಸಯ್ಯದ್, ಮೀನಾಕ್ ಬೋಪೆರ್ ಮತ್ತು ಮಗು ಓಮ್ನಿ ಕಾರಿನಲ್ಲಿ ಗೋವಾದಿಂದ ಅಂಕೋಲಾಕ್ಕೆ ವಾಪಸಾಗುತ್ತಿದ್ದರು. ಈ ವೇಳೆ ಕಾರವಾರ ತಾಲೂಕಿನ ಮುದಗಾ ಬಳಿ ವೇಗವಾಗಿ ಬಂದ ಲಾರಿ ಮತ್ತು ಓಮ್ನಿ ಕಾರು ಮುಖಾಮುಖಿ ಡಿಕ್ಕಿ ಹೊಡೆದಿದೆ. ಪರಿಣಾಮ ಶಾಫಿಯಾ ಮಹಮ್ಮದ್ ಸಯ್ಯದ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಈ ಕುರಿತು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಪಘಾತದ ರಭಸಕ್ಕೆ ಓಮ್ನಿ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Leave a Reply

Your email address will not be published. Required fields are marked *