ಪ್ರಯಾಗ್‌ರಾಜ್: ಹೊಸಕೋಟೆಯಿಂದ (Hoskote) ಮಹಾ ಕುಂಭಮೇಳಕ್ಕೆ (Maha Kumbh Mela) ತೆರಳುತ್ತಿದ್ದಾಗ ರಸ್ತೆ ಅಪಘಾತದಲ್ಲಿ ಓರ್ವ ಮಹಿಳೆ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿರುವ ಘಟನೆ ಪ್ರಯಾಗ್‌ರಾಜ್‌ಗೆ (Prayagraj) 150 ಕಿ.ಮೀ ದೂರದ ಮಧ್ಯಪ್ರದೇಶದಲ್ಲಿ ನಡೆದಿದೆ.
ಹೊಸಕೋಟೆ ಹಾಗೂ ಎಲೆಕ್ಟ್ರಾನಿಕ್ ಸಿಟಿಯ ಹುಸ್ಕೂರು ಗ್ರಾಮದಿಂದ 14 ಜನ ಮಹಾ ಕುಂಭಮೇಳಕ್ಕೆ ಹೊರಟಿದ್ದರು. 14 ಜನರ ಪೈಕಿ ಓರ್ವ ಮಹಿಳೆ ಸಾವನ್ನಪ್ಪಿದ್ದು, ಹಲವರು ತೀವ್ರ ಗಾಯಗೊಂಡಿದ್ದಾರೆ. ಇದನ್ನೂ ಓದಿ: ಅಮಾನವೀಯವಾಗಿ ಮೃತ ಕಾರ್ಮಿಕನ ಶವ ಎಳೆದೊಯ್ದ 6 ಮಂದಿ ವಿರುದ್ಧ ಎಫ್ಐಆರ್
Advertisement
Advertisement
ಒನ್ ವೇನಲ್ಲಿ ಬಂದ ಟ್ಯಾಂಕರ್ ವಾಹನ ಪ್ರಯಾಣಿಕರಿದ್ದ ಟಿಟಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಟಿಟಿ ವಾಹನ ಸಂಪೂರ್ಣ ನಜ್ಜುಗುಜ್ಜಾಗಿದೆ. ಇದನ್ನೂ ಓದಿ: ಕೋಲಾರ ಹಾಲು ಒಕ್ಕೂಟದಲ್ಲಿ ಭ್ರಷ್ಟಾಚಾರ; ಕಾಂಗ್ರೆಸ್ ಶಾಸಕರ ಮಧ್ಯೆಯೇ ಕೋಟ್ಯಂತರ ರೂಪಾಯಿ ಹಗರಣ ಫೈಟ್