ಭಾರೀ ಮಳೆಗೆ ದ.ಕ ಜಿಲ್ಲೆಯಲ್ಲಿ ಮಹಿಳೆ ಬಲಿ – ಸಾವಿನ ಸಂಖ್ಯೆ 5ಕ್ಕೆ ಏರಿಕೆ

Public TV
1 Min Read
Dakshina Kannada Bantwala rain

ಮಂಗಳೂರು: ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯಲ್ಲಿ ಈ ಬಾರಿಯ ಭೀಕರ ಮಳೆಗೆ (Rain) 5ನೇ ಸಾವಾಗಿದೆ. ಗುಡ್ಡ ಕುಸಿದು ಮನೆಯೊಳಗೆ ಸಿಲುಕಿದ್ದ ಇಬ್ಬರು ಮಳೆಯರಲ್ಲೊಬ್ಬರು ಸಾವನ್ನಪ್ಪಿದ್ದಾರೆ.

ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ (Bantwala) ತಾಲೂಕಿನ ಸಜೀಪಮುನ್ನೂರು ಗ್ರಾಮದ ನಂದಾವರದಲ್ಲಿ ನಡೆದಿದೆ. ಮನೆಯ ಮೇಲೆ ಗುಡ್ಡ ಕುಸಿದ ಪರಿಣಾಮ ಇಬ್ಬರು ಮಹಿಳೆಯರು ಮನೆಯೊಳಗೆ ಸಿಲುಕಿಕೊಂಡಿದ್ದರು.

Dakshina Kannada Bantwala

ಘಟನೆ ಬಳಿಕ ಸ್ಥಳಕ್ಕಾಗಮಿಸಿದ ಬಂಟ್ವಾಳ ಅಗ್ನಿಶಾಮಕ ಅಧಿಕಾರಿಗಳು, ಪೊಲೀಸರು ಹಾಗೂ ಸ್ಥಳೀಯರು ಕಾರ್ಯಾಚರಣೆ ನಡೆಸಿ ಓರ್ವ ಮಹಿಳೆಯನ್ನು ರಕ್ಷಣೆ ಮಾಡಿದ್ದಾರೆ. ಆದರೆ ಮನೆಯೊಳಗೆ ಸಿಲುಕಿದ್ದ ಝರೀನಾ (46) ಸಾವನ್ನಪ್ಪಿದ್ದು, ಅವರ ಮೃತದೇಹವನ್ನು ಹೊರತೆಗೆಯಲಾಗಿದೆ. ಇದನ್ನೂ ಓದಿ: ಧಾರಾಕಾರ ಮಳೆಗೆ ಉಡುಪಿಯಲ್ಲಿ ಮತ್ತೊಂದು ಬಲಿ

ಝರೀನಾ ಪುತ್ರಿ ಶಫಾ (20) ಅವರನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ಈ ಬಾರಿಯ ಮಳೆಗೆ ದ.ಕ ಜಿಲ್ಲೆಗೆ ಇದು 5ನೇ ಬಲಿಯಾಗಿದೆ. ಸ್ಥಳಕ್ಕೆ ಬಂಟ್ವಾಳ ತಹಶೀಲ್ದಾರ್ ಎಸ್‌ಬಿ ಕೂಡಲಗಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಉತ್ತರಕನ್ನಡದಲ್ಲಿ ಮಳೆಯಬ್ಬರಕ್ಕೆ ನಡೆದುಕೊಂಡು ಹೋಗ್ತಿದ್ದ ಇಬ್ಬರು ನೀರುಪಾಲು

Web Stories

Share This Article