ಹಾಸನ: ಕಾಫಿ ತೋಟದಲ್ಲಿ ಕೆಲಸ ಮಾಡ್ತಿದ್ದ ಮಹಿಳೆ (Woman)ಮೇಲೆ ಕಾಡಾನೆ (Elephant) ದಾಳಿ ನಡೆಸಿ, ತುಳಿದು ಕೊಂದ ಘಟನೆ ಸಕಲೇಶಪುರ (Sakleshpur) ತಾಲೂಕಿನ ಮೋಗಲಿ ಗ್ರಾಮದಲ್ಲಿ ನಡೆದಿದೆ.
ಆನೆ ದಾಳಿಯಿಂದ ಸಾವನ್ನಪ್ಪಿದ ಮಹಿಳೆಯನ್ನು ಶೋಭಾ (40) ಎಂದು ಗುರುತಿಸಲಾಗಿದೆ. ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಕಾಡಾನೆ ಏಕಾಏಕಿ ಮಹಿಳೆ ಮೇಲೆ ದಾಳಿ ಮಾಡಿದೆ ಎಂದು ತಿಳಿದುಬಂದಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು, ಡಿಎಫ್‍ಓ ಸೌರಭ್‍ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಸಕಲೇಶಪುರದ ಮೂಗಲಿಯಲ್ಲಿ ಆನೆ ದಾಳಿಗೆ ಮಹಿಳೆ ಸಾವು – ಈಶ್ವರ ಖಂಡ್ರೆ ಸಂತಾಪ
ಮಹಿಳೆಯ ಮೃತದೇಹವನ್ನು ಮೇಲೆತ್ತಲು ಬಿಡದೇ ಸ್ಥಳೀಯರು ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಅಧಿಕಾರಿಗಳು ಕಾಡಾನೆಗಳು ಇರುವ ಬಗ್ಗೆ ಸರಿಯಾದ ಮಾಹಿತಿ ನೀಡುತ್ತಿಲ್ಲ. ಪುಂಡಾನೆಗಳು ಮನುಷ್ಯರ ಮೇಲೆ ದಾಳಿ ಮಾಡುತ್ತಿದ್ದರೂ ಸೆರೆ ಹಿಡಿಯುತ್ತಿಲ್ಲ. ಪುಂಡಾನೆಗಳಿಗೆ ರೆಡಿಯೋ ಕಾಲರ್ ಅಳವಡಿಸದೇ ನಿರ್ಲಕ್ಷ್ಯ ವಹಿಸಿದ್ದೀರಿ. ನಿಮ್ಮ ಪರಿಹಾರದ ಹಣ ನಾವೇ ಕೊಡುತ್ತೇವೆ ಎಂದು ಅಸಮಾಧಾನ ಹೊರಹಾಕಿದ್ದಾರೆ.
ಘಟನಾ ಸ್ಥಳಕ್ಕೆ ಡಿಸಿ ಕೆ.ಎಸ್.ಲತಾಕುಮಾರಿ, ಶಾಸಕ ಸಿಮೆಂಟ್ ಮಂಜು, ಮಾಜಿ ಶಾಸಕ ಹೆಚ್.ಕೆ. ಕುಮಾರಸ್ವಾಮಿ ಭೇಟಿ ನೀಡಿ ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ. ಇದನ್ನೂ ಓದಿ: ಕ್ರೀಡಾಪಟುಗಳು ಸೇರಿ ನನ್ನ ಹೆಸರು ಇಟ್ಟರೆ ನಿಮಗೆ ಯಾಕೆ ಹೊಟ್ಟೆ ಉರಿ? – ಪರಮೇಶ್ವರ್

