ಕಾಫಿ ಎಸ್ಟೇಟ್‌ನಲ್ಲಿ ಕೆಲಸ ಮಾಡುವಾಗ ಏಕಾಏಕಿ ಕಾಡಾನೆ ದಾಳಿ – ಮಹಿಳೆ ಸಾವು

Public TV
1 Min Read
VINODHA

ಚಿಕ್ಕಮಗಳೂರು: ಕಾಡಾನೆ ದಾಳಿಯಿಂದ  (Elephant Attack) ಕೂಲಿ ಕಾರ್ಮಿಕ ಮಹಿಳೆ ಮೃತಪಟ್ಟ ಘಟನೆ ಎನ್.ಆರ್.ಪುರ  (NR Pura) ತಾಲೂಕಿನ ಕತ್ತಲೇಖಾನ್ ಎಸ್ಟೇಟ್‍ನಲ್ಲಿ ನಡೆದಿದೆ.

ಮೃತ ಮಹಿಳೆಯನ್ನು ವಿನೋದಾ (39) ಎಂದು ಗುರುತಿಸಲಾಗಿದೆ. ಕಾಫಿ ಹಣ್ಣು ಕೊಯ್ಯುವ ಕೆಲಸಕ್ಕೆ ತೆರಳಿದ್ದ ವೇಳೆ ಆನೆ ದಾಳಿ ನಡೆಸಿದೆ. ಇದರಿಂದ ಅವರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.

ಮೃತ ಮಹಿಳೆ ವಿಜಯನಗರ ಜಿಲ್ಲೆಯ ಹರಪನಹಳ್ಳಿ ಮೂಲದವರು. ಅವರ ಕುಟುಂಬ ಕೂಲಿ ಕೆಲಸಕ್ಕಾಗಿ ಚಿಕ್ಕಮಗಳೂರಿನ (Chikkamagaluru) ಕತ್ತಲೇಖಾನ್ ಎಸ್ಟೇಟ್‍ಗೆ ಬಂದಿದ್ದರು. ಇಂದು (ಫೆ.8) ಬೆಳಗ್ಗೆ ಕಾಫಿ ಹಣ್ಣು ಕೊಯ್ಯುವಾಗ ಮಹಿಳೆ ಮೇಲೆ ಏಕಾಏಕಿ ಕಾಡಾನೆ ದಾಳಿ ನಡೆಸಿದೆ ಎಂದು ತಿಳಿದು ಬಂದಿದೆ.

ಸ್ಥಳಕ್ಕೆ ಅರಣ್ಯ ಅಧಿಕಾರಿಗಳ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

Share This Article