Thursday, 16th August 2018

Recent News

ಅನೈತಿಕ ಸಂಬಂಧದ ಶಂಕೆಗೆ ಮಹಿಳೆ ಬಲಿ!

ಕಲಬುರಗಿ: ಅನೈತಿಕ ಸಂಬಂಧ ಶಂಕೆ ವ್ಯಕ್ತವಾಗಿದ್ದರಿಂದ ಬೆಂಕಿಗೆ ಬಲಿಯಾಗಿದ್ದ ಮಹಿಳೆಯೊಬ್ಬರು ಇಂದು ಜಿಲ್ಲಾಸ್ಪತ್ರೆಯಲ್ಲಿ ಮೃತಟ್ಟಿದ್ದಾರೆ.

ಜಿಲ್ಲೆಯ ಆಳಂದ ತಾಲೂಕಿನ ಕೊಡಲಹಂಗರಗಾ ಗ್ರಾಮದ ಶಾರದಾಬಾಯಿ (20) ಮೇಲೆ ಅನೈತಿಕ ಸಂಬಂಧದ ಶಂಕೆ ವ್ಯಕ್ತವಾಗಿತ್ತು. ಹೀಗಾಗಿ ಪತಿ ವೀರಣ್ಣ ಪೋಷಕರ ಜೊತೆ ಸೇರಿ ಪತ್ನಿ ಶಾರದಾಬಾಯಿಗೆ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿದ್ದನು. ಘಟನೆ ನಂತರ ಶಾರದಾಬಾಯಿಯನ್ನು ಜಿಲ್ಲಾಸ್ಪತ್ರೆಗೆ ದಾಖಲು ವೀರಣ್ಣ ಪರಾರಿಯಾಗಿದ್ದನು. ಇದನ್ನು ಓದಿ: ಅನೈತಿಕ ಸಂಬಂಧ ಶಂಕೆ: ಪೋಷಕರೊಂದಿಗೆ ಸೇರಿ ಪತ್ನಿಗೆ ಬೆಂಕಿ ಇಟ್ಟ ಪತಿ!

ಶಾರದಾಬಾಯಿಯ ದೇಹವು 80% ರಷ್ಟು ಸುಟ್ಟ ಗಾಯಗಳಾಗಿತ್ತು. ಹೀಗಾಗಿ ಸಾವು ಬದುಕಿನ ಮಧ್ಯ ಹೋರಾಡುತ್ತಿದ್ದ ಶಾರದಾಬಾಯಿ ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ಬೆಳಗ್ಗೆ ಮೃತಪಟ್ಟಿದ್ದಾರೆ.

ಈ ಕುರಿತು ಆಳಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸದ್ಯ ಪೊಲೀಸರು ಪತಿ ವೀರಣ್ಣನನ್ನು ಬಂಧಿಸಿದ್ದಾರೆ. ಇನ್ನು ಪ್ರಕರಣದ ಆರೋಪಿಗಳಾದ ಅತ್ತೆ ನೀಲಮ್ಮಾ, ಮಾವ ಗುಂಡಪ್ಪನಿಗಾಗಿ ತೀವ್ರ ಶೋಧ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *