ಹಾಸನ: ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಮಹಿಳೆ (Woman ) ಹಾಗೂ ಹಸು ಸಾವನ್ನಪ್ಪಿರುವ ಘಟನೆ ಬೇಲೂರಿನ ಬಳ್ಳೂರು ಗ್ರಾಮದಲ್ಲಿ ನಡೆದಿದೆ.
ರಂಗಮ್ಮ (60) ಮೃತ ದುರ್ದೈವಿ. ಭಾರೀ ಗಾಳಿ, ಮಳೆಯಿಂದ ಜನರು ಓಡಾಡುವ ರಸ್ತೆ ಮಧ್ಯೆ ವಿದ್ಯುತ್ ತಂತಿ ತುಂಡಾಗಿ ಬಿದ್ದಿತ್ತು. ಇದೇ ದಾರಿಯಲ್ಲಿ ರಂಗಮ್ಮ ಹಸು ಮೇಯಿಸಿಕೊಂಡು ಮನೆಗೆ ವಾಪಾಸ್ಸಾಗುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ. ಇದನ್ನೂ ಓದಿ: ಸಿದ್ದರಾಮಯ್ಯ Vs ಬೊಮ್ಮಾಯಿ – ಯಾವ ಇಲಾಖೆಗೆ ಎಷ್ಟು ಕೋಟಿ ಅನುದಾನ ಸಿಕ್ಕಿದೆ?
Advertisement
ತಂತಿ ತುಂಡಾಗಿ ಬೀಳುವಂತಿದ್ದು ದುರಸ್ತಿ ಮಾಡುವಂತೆ ಒಂದು ತಿಂಗಳಿನಿಂದ ಗ್ರಾಮಸ್ಥರು ಚೆಸ್ಕಾಂ (Cheskam) ಸಿಬ್ಬಂದಿಗೆ ಮನವಿ ಮಾಡಿದ್ದರು. ಆದರೂ ಈ ಬಗ್ಗೆ ಅಧಿಕಾರಿಗಳು ಕ್ರಮಕೈಗೊಂಡಿರಲಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಸಿಬ್ಬಂದಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಹಾಗೂ ಮೃತ ಮಹಿಳೆಯ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದ್ದಾರೆ.
Advertisement
ಒಂದು ವರ್ಷದ ಹಿಂದೆ ಇದೇ ಜಾಗದಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ರಂಗಮ್ಮ ಬಾಮೈದ ಯಜಮಾನ್ ಗೌಡ ಎಂಬುವವರು ಸಾವಿಗೀಡಾಗಿದ್ದರು.
Advertisement
Advertisement
ಜಿಲ್ಲೆಯಲ್ಲಿ ಮತ್ತೊಂದು ಇದೇ ಬಗೆಯ ಘಟನೆ ನಡೆದಿದ್ದು, ಮೇಯಲು ಬಿಟ್ಟ ಹಸು ತುಂಡಾಗಿದ್ದ ವಿದ್ಯುತ್ ತಂತಿ ತುಳಿದು ಸಾವಿಗೀಡಾದ ಘಟನೆ ಬ್ಯಾಡರಹಳ್ಳಿ ಗ್ರಾಮದಲ್ಲಿ ನಡೆದಿದೆ. ಕಾಪಾಡಲು ಹೋದ ರೈತ ಕೂದಲೆಳೆಯ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾನೆ.
ವಿದ್ಯುತ್ ತಂತಿ ತುಂಡಾಗಿ ಬಿದ್ದಿರುವ ಬಗ್ಗೆ ಸ್ಥಳೀಯರು ಚೆಸ್ಕಾಂ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರು ಚೆಸ್ಕಾಂ ಸಿಬ್ಬಂದಿಗಳು ಸ್ಥಳಕ್ಕೆ ಬಂದು ದುರಸ್ತಿ ಮಾಡಿರಲಿಲ್ಲ. ಅಧಿಕಾರಿಗಳ ನಿರ್ಲಕ್ಷ್ಯದಿಂದ ಈ ಘಟನೆ ನಡೆದಿದೆ ಎಂದು ಗ್ರಾಮಸ್ಥರು ದೂರಿದ್ದಾರೆ. ಇದನ್ನೂ ಓದಿ: ಉತ್ತಮ ಶಿಕ್ಷಣ ಒದಗಿಸುವ ಸಲುವಾಗಿ ರಾಜ್ಯ ಶಿಕ್ಷಣ ನೀತಿ ಜಾರಿ: ಮಧು ಬಂಗಾರಪ್ಪ
Web Stories