ಬೆಂಗಳೂರು: ಮಹಿಳೆಯೊಬ್ಬಳು ನಕಲಿ ಟಿಕೆಟ್ ತೋರಿಸಿ ವಿಮಾನ ನಿಲ್ದಾಣದ ಒಳಗೆ ಪ್ರವೇಶಿಸಿದ ಘಟನೆ ದೇವನಹಳ್ಳಿಯ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ (Kempegowda International Airport) ನಡೆದಿದೆ.
ಅಕ್ರಮವಾಗಿ ವಿಮಾನ ನಿಲ್ದಾಣ ಪ್ರವೇಶಿಸಿದ್ದ ಮಹಿಳೆಯನ್ನು ಹರ್ಪಿತ್ ಕೌರ್ ಸೈನಿ ಎಂದು ಗುರುತಿಸಲಾಗಿದೆ. ಮಹಿಳೆ ಆಯುಷ್ ಶರ್ಮ ಎಂಬಾತನನ್ನು ವಿಮಾನ ನಿಲ್ದಾಣಕ್ಕೆ ಬಿಡಲು ಬಂದಿದ್ದಳು. ಈ ವೇಳೆ ನಕಲಿ ಟಿಕೆಟ್ ತೋರಿಸಿ ಪಿಇಎಸ್‍ಸಿವರೆಗೂ ಹೋಗಿದ್ದಳು. ಬಳಿಕ ಲ್ಯಾಪ್‍ಟಾಪ್ ಕಳೆದುಹೋಗಿದೆ ಎಂದು ಹೊರಗೆ ಬಂದಿದ್ದಳು. ಈ ವೇಳೆ ಅನುಮಾನಗೊಂಡ ಸಿಬ್ಬಂದಿ ಟಿಕೆಟ್ ಪರಿಶೀಲನೆ ನಡೆಸಿದಾಗ ನಕಲಿ ಟಿಕೆಟ್ ಎನ್ನುವುದು ತಿಳಿದು ಬಂದಿದೆ. ಇದನ್ನೂ ಓದಿ: ತಿರುಪತಿ ವೆಂಕಟೇಶ್ವರ ಸ್ವಾಮಿ ದೇವಾಲಯಕ್ಕೆ ಪ್ರಧಾನಿ ಮೋದಿ ಭೇಟಿ
Advertisement
Advertisement
ಈ ಸಂಬಂಧ ಕೆಂಪೇಗೌಡ ವಿಮಾನ ನಿಲ್ದಾಣ ಪೊಲೀಸ್ (Police) ಠಾಣೆಯಲ್ಲಿ ಎಫ್‍ಐಆರ್ (FIR) ದಾಖಲಾಗಿದೆ. ಪೊಲೀಸರು ಈ ಬಗ್ಗೆ ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಗುಜರಾತ್‌ನಲ್ಲಿ ಸಿಡಿಲು ಬಡಿದು 20 ಮಂದಿ ದುರ್ಮರಣ – ಅಮಿತ್ ಶಾ ಸಂತಾಪ