ಬೆಂಗಳೂರು: ಸ್ನೇಹಿತರ ಜೊತೆ ದೈಹಿಕ ಸಂಪರ್ಕ ಬೆಳೆಸುವಂತೆ ವಿಕೃತ ಪತಿಯೊಬ್ಬ (Husband) ಪತ್ನಿಗೆ ಹಿಂಸೆ ನೀಡುತ್ತಿದ್ದ ವಿಚಿತ್ರ ಪ್ರಕರಣ ಅಮೃತಹಳ್ಳಿ (Amrithhalli) ಪೊಲೀಸ್ (Police) ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಗಂಡನ ವಿಚಿತ್ರ ಬೇಡಿಕೆ ನಿರಾಕರಿಸಿದ್ದಕ್ಕೆ ಆತ ಪತ್ನಿಯ ಮೇಲೆ ಹಲ್ಲೆ ಸಹ ಮಾಡಿದ್ದಾನೆ. ಅಲ್ಲದೇ ಮಾನಸಿಕ ಹಿಂಸೆ ನೀಡಿದ್ದಾನೆ ಎಂದು ಪತ್ನಿ ಆರೋಪಿಸಿದ್ದಾಳೆ. ಇದೀಗ ಆಕೆ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾಳೆ. ಇದನ್ನೂ ಓದಿ: ಐಟಿ, ಇಡಿ, ಸಿಬಿಐ ಎಲ್ಲಾ ಕೇಂದ್ರದ ವ್ಯಾಪ್ತಿಯಲ್ಲಿವೆ; ಅವರು ಆಡಿದ್ದೇ ಆಟ: ಸಂತೋಷ್ ಲಾಡ್
ಮಂಗಳೂರು ಮೂಲದ ವಿಕೃತ ಪತಿ ವಿರುದ್ಧ ಪತ್ನಿ ದೂರು ದಾಖಲಿಸಿದ್ದಾಳೆ. ದೂರಿನಲ್ಲಿ ಪತಿ ತನ್ನ ಮೂರು ಜನ ಸ್ನೇಹಿತರ ಜೊತೆ ದೈಹಿಕ ಸಂಪರ್ಕ ಬೆಳೆಸುವಂತೆ ಒತ್ತಾಯಿಸುತ್ತಿದ್ದ ಎಂದು ಆರೋಪಿಸಲಾಗಿದೆ.
ಈ ಸಂಬಂಧ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ನಂಜುಂಡೇಶ್ವರನ ಸನ್ನಿಧಾನದಲ್ಲಿ ಹೆಚ್‍ಡಿಕೆ ಕುಟುಂಬದಿಂದ ಬೆಲ್ಲದ ತುಲಾಭಾರ
Web Stories