ಪುಣೆ: ಪತಿ (Husband) ಸಲಿಂಗಿಯಾಗಿದ್ದು, ಆ ವಿಚಾರವನ್ನು ಮರೆಮಾಚಿ ಮದುವೆಯಾಗಿದ್ದಾನೆ ಎಂದು ಆರೋಪಿಸಿ ಮಹಿಳೆಯೊಬ್ಬರು ತನ್ನ ಪತಿ ಮತ್ತು ಅತ್ತೆಯ ವಿರುದ್ಧ ಪೊಲೀಸ್ (Police) ಠಾಣೆಯ ಮೆಟ್ಟಿಲೇರಿರುವ ಘಟನೆ ಪುಣೆಯ (Pune) ವಡ್ಗಾಂಶೇರಿ ಎಂಬಲ್ಲಿ ನಡೆದಿದೆ.
ಜುಲೈ 2022ರಲ್ಲಿ ಮಹಿಳೆಯ ವಿವಾಹವಾಗಿತ್ತು. ಮದುವೆಯ ಬಳಿಕ ಪತಿಯ ಲೈಂಗಿಕ ದೃಷ್ಟಿಕೋನದ ಆಧಾರದ ಮೇಲೆ ಆತ ಸಲಿಂಗಿ ಎಂಬುದು ಪತ್ನಿಗೆ ತಿಳಿದಿದೆ. ಇದರಿಂದ ಮಹಿಳೆ ಪತಿ ಹಾಗೂ ಅವಳ ಅತ್ತೆಯನ್ನು ಪ್ರಶ್ನಿಸಿದ್ದಾಳೆ. ಇದಾದ ಮೇಲೆ ಅತ್ತೆ ಹಾಗೂ ಪತಿ ಸೇರಿ ತನಗೆ ಮಾನಸಿಕ ಹಾಗೂ ದೈಹಿಕ ಕಿರುಕುಳ ನೀಡಿದ್ದಾರೆ. ಅಲ್ಲದೇ ಕಾರು ಮತ್ತು ಹಣಕ್ಕೆ ಬೇಡಿಕೆ ಇಟ್ಟು ನಿರಂತರ ಕಿರುಕುಳ ನೀಡುತ್ತಿದ್ದರು ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾಳೆ. ಇದನ್ನೂ ಓದಿ: ನಿಮ್ಮ ರಾಮಮಂದಿರ ಸ್ಫೋಟಿಸುತ್ತೇವೆ – ಅಲ್ಲಾಹು ಅಕ್ಬರ್ ಹೆಸರಿನಲ್ಲಿ ಬೆದರಿಕೆ ಪತ್ರ
Advertisement
Advertisement
ಈ ಸಂಬಂಧ ಪುಣೆಯ ಚಂದನ್ ನಗರ ಪೊಲೀಸ್ ಠಾಣೆಯಲ್ಲಿ ಮಹಿಳೆಯ ಪತಿ, ಅತ್ತೆ ಮತ್ತು ಮಾವನ ವಿರುದ್ಧ ಐಪಿಸಿ ಸೆಕ್ಷನ್ 420 (ವಂಚನೆ), 498 (ಎ) (ಕ್ರೌರ್ಯಕ್ಕೆ ಒಳಪಡಿಸುವುದು) ಮತ್ತು 504 (ಉದ್ದೇಶಪೂರ್ವಕವಾಗಿ ಅವಮಾನ)ರ ಅಡಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ಆರಂಭಿಸಿದ್ದಾರೆ. ಇದನ್ನೂ ಓದಿ: 2 ಸಾವಿರ ಕೋಟಿ ರೂ ಮೌಲ್ಯದ ಡ್ರಗ್ಸ್ ಕಳ್ಳಸಾಗಣೆ: ಖ್ಯಾತ ನಿರ್ಮಾಪಕ ಜಾಫರ್ ಬಂಧನ
Advertisement