ಮುಂಬೈ: ಸಾರ್ವಜನಿಕವಾಗಿ ಸ್ನಾನ ಮಾಡುವಂತೆ ಪತ್ನಿಗೆ ಕಿರುಕುಳ ನೀಡಿದ್ದ ಪತಿ ವಿರುದ್ಧ ಪುಣೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಪತ್ನಿ ಗರ್ಭಧರಿಸಬೇಕಾದರೆ ಸಾರ್ವಜನಿಕವಾಗಿ ಸ್ನಾನ ಮಾಡಬೇಕೆಂದು ಮಾಂತ್ರಿಕನೋರ್ವ ಸಲಹೆ ನೀಡಿದ್ದರಿಂದ ವ್ಯಕ್ತಿಯೊರ್ವ ತನ್ನ ಪತ್ನಿಗೆ ಸಾರ್ವಜನಿಕವಾಗಿ ಎಲ್ಲರ ಮುಂದೆ ಸ್ನಾನ ಮಾಡುವಂತೆ ಕಿರುಕುಳ ನೀಡಿದ ಹಿನ್ನೆಲೆ ಆತ ಮತ್ತು ಆತನ ಪೋಷಕರ ವಿರುದ್ಧ ಪ್ರಕರಣ ದಾಖಲಾಗಿದೆ.
Advertisement
Advertisement
ಮಾಂತ್ರಿಕ ನೀಡಿದ ಸಲಹೆಯ ಮೇರೆಗೆ ಮಹಿಳೆಯನ್ನು ರಾಯಗಡ ಜಿಲ್ಲೆಯ ಜಲಪಾತಕ್ಕೆ ಕರೆದೊಯ್ದು ವ್ಯಕ್ತಿ ಎಲ್ಲರ ಮುಂದೆ ಸ್ನಾನ ಮಾಡುವಂತೆ ಒತ್ತಾಯಿಸಿದ್ದಾನೆ. ಇದನ್ನೂ ಓದಿ: ಮಡಿಕೇರಿಯಲ್ಲಿ ನಡೆದ ಮೊಟ್ಟೆ ಎಸೆತ ಪ್ರಕರಣ ನನಗೆ ಗೊತ್ತಿಲ್ಲ: ಅಪ್ಪಚ್ಚು ರಂಜನ್
Advertisement
Advertisement
ಆರೋಪಿ ವಿರುದ್ಧ ಭಾರತೀಯ ದಂಡ ಸಂಹಿತೆ ಸೆಕ್ಷನ್ 498 (ವಿವಾಹಿತ ಸ್ತ್ರೀಯನ್ನು ಆಪರಾಧಿಕ ಉದ್ದೇಶದಿಂದ ಪುಸಲಾಯಿಸುವುದು ಅಥವಾ ಕರೆದುಕೊಂಡುಹೋಗುವುದು) ಮತ್ತು ಮಾನವಬಲಿ, ಅಮಾನವೀಯ, ದುಷ್ಟ, ಅಘೋರಿ ಆಚರಣೆಗಳು ಸೇರಿದಂತೆ ಮಹಾರಾಷ್ಟ್ರದ 2013ರ ಬ್ಲ್ಯಾಕ್ ಮ್ಯಾಜಿಕ್ ಆಕ್ಟ್ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಭಾರತಿ ವಿದ್ಯಾಪೀಠದ ಪೊಲೀಸರು ತಿಳಿಸಿದ್ದಾರೆ.
ಈ ಸಂಬಂಧ ತನಿಖೆ ನಡೆಸುವ ವೇಳೆ ದಂಪತಿಗೆ ಮಕ್ಕಳಿರಲಿಲ್ಲ. ಹಾಗಾಗಿ ಮಾಂತ್ರಿಕನ ಸಲಹೆಯ ಮೇರೆಗೆ ಮಹಿಳೆಯನ್ನು ರಾಯಗಡ ಜಿಲ್ಲೆಯ ಜಲಪಾತಕ್ಕೆ ಕರೆದೊಯ್ದು ನಂತರ ಎಲ್ಲರ ಮುಂದೆ ಸ್ನಾನ ಮಾಡುವಂತೆ ಹಿಂಸೆ ನೀಡಿದ್ದಾನೆ ಎಂದು ತಿಳಿದುಬಂದಿದೆ. ಇದನ್ನೂ ಓದಿ: ಕೊಡಗಿನಲ್ಲಿ ನಾಳೆಯಿಂದ ಶನಿವಾರದವರೆಗೆ ನಿಷೇಧಾಜ್ಞೆ- ಮದ್ಯ ಮಾರಾಟ ನಿಷೇಧ