ನೇಣು ಬಿಗಿದ ಸ್ಥಿತಿಯಲ್ಲಿ ನರ್ಸ್ ಮೃತದೇಹ ಪತ್ತೆ – ಅತ್ಯಾಚಾರ ಆರೋಪ ಮಾಡಿದ ಕುಟುಂಬಸ್ಥರು

Advertisements

ಲಕ್ನೋ: ಗೋಡೆಗೆ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆಯೊಬ್ಬರ ಶವ ಪತ್ತೆಯಾಗಿರುವ ಘಟನೆ ಉತ್ತರ ಪ್ರದೇಶದ ಉನ್ನಾವೊದ ನ್ಯೂ ಜೀವನ್ ಆಸ್ಪತ್ರೆಯಲ್ಲಿ ಶನಿವಾರ ಬೆಳಗ್ಗೆ ನಡೆದಿದೆ.

Advertisements

ಮಹಿಳೆಯು ನರ್ಸ್ ಆಗಿದ್ದು, ಶುಕ್ರವಾರ ಅವರ ಮೊದಲ ಕೆಲಸದ ದಿನವಾಗಿತ್ತು. ದುರಾದೃಷ್ಟವಶಾತ್ ಮರುದಿನ ಅವರು ಶವವಾಗಿ ಪತ್ತೆಯಾಗಿದ್ದಾರೆ. ಇದನ್ನೂ ಓದಿ:  ಆ್ಯಸಿಡ್ ದಾಳಿಗೆ ಒಳಗಾದ ಯುವತಿ ಚಿಕಿತ್ಸೆಗೆ 1 ಲಕ್ಷ ರೂ. ಚಕ್ ಕೊಟ್ಟ 

Advertisements

ಆಕೆಯ ಮೇಲೆ ಅತ್ಯಾಚಾರ ಎಸಗಲಾಗಿದ್ದು, ನಂತರ ಅವರನ್ನು ಹತ್ಯೆ ಮಾಡಲಾಗಿದೆ ಎಂದು ಕುಟುಂಬದವರು ಆರೋಪಿಸಿದ್ದಾರೆ. ಘಟನೆ ಕುರಿತು ಮೂವರ ವಿರುದ್ಧ ಎಫ್‍ಐಆರ್ ದಾಖಲಿಸಲಾಗಿದ್ದು, ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಉನ್ನಾವ್‍ನ ಹೆಚ್ಚುವರಿ ಎಸ್ಪಿ ಶಶಿ ಶೇಖರ್ ಸಿಂಗ್ ಹೇಳಿದ್ದಾರೆ. ಇದನ್ನೂ ಓದಿ: ಅವನನ್ನ ಪ್ಲೀಸ್ ಬಿಡಬೇಡಿ, ಅವನಿಗೆ ಶಿಕ್ಷೆಯಾಗಲೇ ಬೇಕು: ಪೊಲೀಸರನ್ನು ಬೇಡಿಕೊಂಡ ಆಸಿಡ್ ಸಂತ್ರಸ್ತೆ

Advertisements

ನರ್ಸಿಂಗ್  ಹೋಂನ ನಿರ್ವಾಹಕ ಸೇರಿದಂತೆ ಮೂವರನ್ನು ಆರೋಪಿಗಳೆಂದು ಹೆಸರಿಸಿದ್ದಾರೆ. ಘಟನೆ ಸಂಬಂಧ ಎಫ್‍ಐಆರ್ ದಾಖಲಾಗಿದೆ. ಮಹಿಳೆಯ ಶವವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.

Advertisements
Exit mobile version