ಹೈದರಾಬಾದ್: ಆಂಧ್ರಪ್ರದೇಶದ (Andhra Pradesh) ಪಲ್ನಾಡು ಜಿಲ್ಲೆಯ ಮಾಚೆರ್ಲಾ ಪಟ್ಟಣದಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ನೀರು ಕೇಳುವ ನೆಪದಲ್ಲಿ ಮನೆಗೆ ನುಗ್ಗಿ ಮಹಿಳೆಯ (Woman) ಕೈ, ಬಾಯಿ ಕಟ್ಟಿ, ಚಾಕು ತೋರಿಸಿ ಅತ್ಯಾಚಾರ ಎಸಗಿದ್ದಾನೆ.
ಸರ್ಕಾರಿ ಉದ್ಯೋಗಿಯಾಗಿರುವ 30 ವರ್ಷದ ಮಹಿಳೆ ಏ.3 ರಂದು ಮನೆಯಲ್ಲಿ ಒಬ್ಬಂಟಿಯಾಗಿದ್ದರು. ಸುಮಾರು ಮಧ್ಯಾಹ್ನ 3:30-4 ಗಂಟೆಯ ಸುಮಾರಿಗೆ ಕುಡಿಯುವ ನೀರು ಕೇಳಿಕೊಂಡು ಅಪರಿಚಿತ ವ್ಯಕ್ತಿ ಬಂದಿದ್ದ. ಮಹಿಳೆ ನೀರು ತರಲು ಒಳಗೆ ಹೋದಾಗ ಆಕೆಯ ಕೈ ಹಾಗೂ ಬಾಯಿಗೆ ಬಟ್ಟೆ ಕಟ್ಟಿ, ಚಾಕುವಿನಿಂದ ಬೆದರಿಸಿ, ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಲ್ಲದೇ ಚಿತ್ರಹಿಂಸೆ ನೀಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಹುಬ್ಬಳ್ಳಿ ಪ್ರಕರಣ – ಜಿಮ್ ಟ್ರೈನರ್ ವಿರುದ್ಧ ಕ್ರಮಕ್ಕೆ ಸೂಚಿಸಿದ ಪರಮೇಶ್ವರ್
ಮಹಿಳೆಯ ಮನೆಗೆ ನೆರೆಹೊರೆಯವರು ತೆರಳಿದಾಗ ಈ ಪ್ರಕರಣ ಬೆಳಕಿಗೆ ಬಂದಿದೆ. ಈ ವೇಳೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಮಹಿಳೆಯನ್ನು. ಮಾಚೆರ್ಲಾದ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ನಂತರ ವಿಶೇಷ ಚಿಕಿತ್ಸೆಗಾಗಿ ನರಸರಾವ್ಪೇಟ ಏರಿಯಾ ಆಸ್ಪತ್ರೆಗೆ ವರ್ಗಾಯಿಸಲಾಗಿದೆ. ಆಕೆಯ ಸ್ಥಿತಿ ಈಗ ಸ್ಥಿರವಾಗಿದೆ ಮತ್ತು ಆಕೆಯನ್ನು ಇನ್ನೂ ನಿಗಾದಲ್ಲಿ ಇರಿಸಲಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಶಂಕಿತನನ್ನು ಗುರುತಿಸಲು ವಿಶೇಷ ತಂಡಗಳನ್ನು ರಚಿಸಲಾಗಿದೆ ಮತ್ತು ಕರೆ ಡೇಟಾ ಮತ್ತು ಸಿಸಿಟಿವಿ ದೃಶ್ಯಾವಳಿಗಳ ವಿಶ್ಲೇಷಣೆ ನಡೆಯುತ್ತಿದೆ. ಕೆಲವು ಪ್ರಮುಖ ಸುಳಿವುಗಳಿವೆ ಮತ್ತು ನಮ್ಮ ತಂಡಗಳು 24 ಗಂಟೆಗಳ ಕಾಲ ಕೆಲಸ ಮಾಡುತ್ತಿವೆ. ಆರೋಪಿ ವಿರುದ್ಧ ಕಠಿಣ ಕ್ರಮಕೈಗೊಳ್ಳುತ್ತೇವೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಕರಣದ ಬಗ್ಗೆ ವದಂತಿಗಳನ್ನು ಹರಡದಂತೆ ಪೊಲೀಸರು ಸಾರ್ವಜನಿಕರಿಗೆ ಸೂಚಿಸಿದ್ದಾರೆ. ಯಾರಾದರೂ ಸುಳಿವುಗಳಿದ್ದರೆ ತನಿಖೆಗೆ ಸಹಾಯ ಮಾಡುವಂತೆ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಪಶ್ಚಿಮ ಬಂಗಾಳ | ನ್ಯಾಯಾಧೀಶರನ್ನು ಒತ್ತೆಯಾಳಾಗಿರಿಸಿಕೊಂಡು ಪ್ರತಿಭಟನೆ – ಮಾಸ್ಟರ್ ಮೈಂಡ್ ಅಂದರ್

