ಬೆಂಗಳೂರು: ಪರಿಚಯಸ್ಥ ಮಹಿಳೆ ಮೇಲೆ ನಾಲ್ವರು ಯುವಕರು ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ನಗರದ ಕೋರಮಂಗಲದಲ್ಲಿ (Koramangala) ನಡೆದಿದೆ.
ಕೋರಮಂಗಲದ ಜ್ಯೋತಿ ನಿವಾಸ ಜಂಕ್ಷನ್ ಬಳಿಯಿರುವ ಖಾಸಗಿ ಹೋಟೆಲ್‌ನ (Private Hotel) ಟೆರೆಸ್ ಮೇಲೆ ಕಾಮುಕರು ಪರಿಚಯಸ್ಥ ಮಹಿಳೆ ಮೇಲೆ ಅತ್ಯಾಚಾರ ಎಸಗಿದ್ದಾರೆ. ಈ ಕುರಿತು ಸಂತ್ರಸ್ತ ಮಹಿಳೆ ಮುಂಜಾನೆ 5 ಗಂಟೆ ಸುಮಾರಿಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ನನ್ನ ನಾಯಕತ್ವದಲ್ಲೇ ಚುನಾವಣೆ ನಡೆದಾಗ ಆ ಪದ ಹೇಳಿ: ಪಟ್ಟದ ಫೈಟ್ ವೇಳೆ ಹೊಸ ದಾಳ ಉರುಳಿಸಿದ ಡಿಕೆಶಿ
Advertisement
Advertisement
ಬಳಿಕ ಪ್ರಕರಣ ದಾಖಲಿಸಿಕೊಂಡಿರುವ ಕೋರಮಂಗಲ ಠಾಣೆ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಕೃತ್ಯ ಎಸಗಿದ ಕಾಮುಕರಿಗಾಗಿ ಹುಡುಕಾಟ ನಡೆಸಿದ್ದಾರೆ. ಸದ್ಯ ಸಂತ್ರಸ್ತ ಮಹಿಳೆಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಇದನ್ನೂ ಓದಿ: ಗಂಗಾ ನೀರು ಸ್ನಾನಕ್ಕೆ ಸುರಕ್ಷಿತ.. ಅದರ ಸಂಪರ್ಕದಿಂದ ಚರ್ಮ ರೋಗಗಳು ಬರಲ್ಲ: ಪದ್ಮಶ್ರೀ ಪುರಷ್ಕೃತ ವಿಜ್ಞಾನಿ ಡಾ.ಅಜಯ್ ಸೋಂಕರ್
Advertisement
Advertisement
ಒಂದು ತಿಂಗಳ ಹಿಂದೆಯಷ್ಟೇ ನಗರದ ಕೆ.ಆರ್ ಮಾರ್ಕೆಟ್‌ನಲ್ಲಿ ಬಸ್‌ಗಾಗಿ ಕಾಯುತ್ತಿದ್ದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದ ಘಟನೆ ನಡೆದಿತ್ತು.