ನವದೆಹಲಿ: 24 ವರ್ಷದ ಯುವತಿಯ ಮೇಲೆ ಆಕೆಯ ಸ್ನೇಹಿತ ಮತ್ತು ಆತನ ಇಬ್ಬರು ಸಹಚರರು ಸೇರಿ ಕಾರಿನೊಳಗೆ ಸಾಮೂಹಿಕವಾಗಿ ಅತ್ಯಾಚಾರ ಎಸಗಿರುವ ಘಟನೆ ಪೂರ್ವ ದೆಹಲಿಯ ಶಹ್ದಾರಾದಲ್ಲಿ ನಡೆದಿದೆ.
ಈ ಘಟನೆ ಸೋಮವಾರ ರಾತ್ರಿ ಶಹ್ದಾರಾದಲ್ಲಿರುವ ಕ್ರಾಸ್ ರಿವರ್ ಮಾಲ್ ಬಳಿ ನಡೆದಿದ್ದು, ಆರೋಪಿಯನ್ನು ಅಮಿತ್(30) ಎಂದು ಗುರುತಿಸಲಾಗಿದ್ದು, ಪೊಲೀಸರು ಈತನನ್ನು ಬಂಧಿಸಿದ್ದು, ಮತ್ತಿಬ್ಬರಿಗಾಗಿ ಹುಡುಕಾಟ ಮಾಡುತ್ತಿದ್ದಾರೆ. ಆರೋಪಿಗಳು ಸಂತ್ರಸ್ತೆಗೆ ಮತ್ತು ಬರುವ ಔಷಧಿಯನ್ನು ಜ್ಯೂಸಿನಲ್ಲಿ ಮಿಕ್ಸ್ ಮಾಡಿ ಕುಡಿಸಿ ಬಳಿಕ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ.
Advertisement
Advertisement
ಸಂತ್ರಸ್ತೆ ಮಾಲ್ ನ ಬಳಿ ಕಾರಿನಲ್ಲಿ ಕುಳಿತು ಅಳುತ್ತಿದ್ದನ್ನು ನೋಡಿದ ದಾರಿಹೋಕರು ಪೊಲೀಸರಿಗೆ ಮಾಹಿತಿ ತಿಳಿಸಿದ್ದಾರೆ. ಮಾಹಿತಿ ತಿಳಿದು ಪೊಲೀಸರು ಸ್ಥಳಕ್ಕೆ ಬಂದು ಸಂತ್ರಸ್ತೆಯ ರಕ್ಷಣೆ ಮಾಡಿದ್ದು, ಬಳಿಕ ಸಂತ್ರಸ್ತೆ ನಡೆದ ಘಟನೆಯ ಬಗ್ಗೆ ಪೊಲೀಸರಿಗೆ ವಿವರಿಸಿದ್ದಾರೆ.
Advertisement
ಏನಿದು ಪ್ರಕರಣ
ಆರೋಪಿ ಅಮಿತ್ ಒಬ್ಬ ವ್ಯಾಪಾರಿಯಾಗಿದ್ದು, ಉತ್ತರ ಪ್ರದೇಶದ ಬಾಗ್ಪಾತ್ ನಲ್ಲಿ ವಾಸಿಸುತ್ತಿದ್ದನು. ಎರಡು ತಿಂಗಳ ಹಿಂದೆ ಸಂತ್ರಸ್ತೆಯ ಪರಿಚಯವಾಗಿತ್ತು. ಆಗ ಸಂತ್ರಸ್ತೆಗೆ ತುಂಬಾ ಕಡಿಮೆ ಬಡ್ಡಿದರದಲ್ಲಿ ಹೋಮ್ ಲೋನ್ ಕೊಡಿಸುವುದಾಗಿ ಭರವಸೆ ನೀಡಿದ್ದನು. ಸಂತ್ರಸ್ತೆಯ ದೆಹಲಿಯ ಸೀಲಾಂಪುರ್ ನಿವಾಸಿಯಾಗಿದ್ದು, ಆರೋಪಿ ಅಮಿತ್ ಹೇಳಿದ ಮಾತನ್ನು ನಂಬಿ ಸೋಮವಾರ ಕ್ರಾಸ್ ರಿವರ್ ಮಾಲ್ ಸಮೀಪ ಬಂದಿದ್ದಾಳೆ.
Advertisement
ಹಣಕಾಸು ವ್ಯವಹಾರ ಮಾಡಲು ಆರೋಪಿ ತನ್ನ ಜೊತೆ ಇಬ್ಬರು ಸ್ನೇಹಿತರನ್ನು ಕರೆದುಕೊಂಡು ಹೋಗಿದ್ದಾನೆ. ಅಲ್ಲಿ ಸಂತ್ರಸ್ತೆ ಸೇರಿದಂತೆ ನಾಲ್ವರು ಸಾಲದ ಬಗ್ಗೆ ಮಾತನಾಡುತ್ತಿದ್ದು, ಆಗ ಸಂತ್ರಸ್ತೆಗೆ ಕುಡಿಯಲು ಜ್ಯೂಸ್ ಕೊಟ್ಟಿದ್ದಾರೆ. ಆದರೆ ಆ ಜ್ಯೂಸಿನಲ್ಲಿ ಮತ್ತು ಬರುವ ಔಷಧಿಯನ್ನು ಮಿಕ್ಸ್ ಮಾಡಿ ಕೊಟ್ಟಿದ್ದಾರೆ. ಅದನ್ನು ಕುಡಿದ ಸಂತ್ರಸ್ತೆ ಸ್ವಲ್ಪ ಸಮಯದ ನಂತರ ಪ್ರಜ್ಞೆಹೀನರಾಗಿ ಬಿದ್ದಿದ್ದಾರೆ. ತಕ್ಷಣ ಮೂವರು ಆಕೆಯನ್ನು ಕಾರಿನೊಳಗೆ ಕರೆದುಕೊಂಡು ಹೋಗಿ ಸಾಮೂಹಿಕ ಅತ್ಯಾಚಾರವಾಗಿ ಎಸಗಿ ಸಂತ್ರಸ್ತೆಯನ್ನು ಅಲ್ಲೆ ಬಿಟ್ಟು ಪರಾರಿಯಾಗಿದ್ದಾರೆ ಎಂದು ಪೊಲೀಸ್ ಠಾಣಾಧಿಕಾರಿ ಮೇಘನಾ ಯಾದವ್ ತಿಳಿಸಿದ್ದಾರೆ.
ಸದ್ಯಕ್ಕೆ ಈ ಕುರಿತು ಪೊಲೀಸರು ಅತ್ಯಾಚಾರ ಪ್ರಕರಣವನ್ನು ದಾಖಲಿಸಿಕೊಂಡಿದ್ದು, ಮತ್ತಿಬ್ಬರು ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com/publictv