ಭಾವಿ ಪತಿ ಎದುರೇ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ – ವಿಡಿಯೋ ಮಾಡಿ ಹರಿಬಿಟ್ಟ ದುಷ್ಕರ್ಮಿಗಳು

Public TV
1 Min Read
Mobile video recording

ಭುವನೇಶ್ವರ: 21 ವರ್ಷದ ಯುವತಿಯ ಮೇಲೆ ಮೂವರು ಅಪರಿಚಿತ ವ್ಯಕ್ತಿಗಳು ಆಕೆಯ ಭಾವಿ ಪತಿ ಎದುರಿನಲ್ಲೇ ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ಒಡಿಶಾದ (Odisha) ನಯಾಗಢದಲ್ಲಿ ನಡೆದಿದೆ.

ಘಟನೆ ಅ.20 ರಂದು ನಡೆದಿದ್ದು, ಸಂತ್ರಸ್ತೆ ಫತೇಗಢ ಪೊಲೀಸ್ (Police) ಠಾಣೆಗೆ ದೂರು ನೀಡಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಯುವತಿಗೆ ಮದುವೆ ನಿಶ್ಚಯವಾಗಿತ್ತು. ಆಕೆ ತನ್ನ ಭಾವಿ ಪತಿ ಜೊತೆಗೆ ಫತೇಗಢ್ ರಾಮ ಮಂದಿರಕ್ಕೆ ಭೇಟಿ ನೀಡಿ ಮನೆಗೆ ಹಿಂದಿರುಗುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ವಿಮಾನಗಳ ಬೆನ್ನಲ್ಲೇ ತಿರುಪತಿ ಹೋಟೆಲ್‌ಗಳಿಗೆ ಬಾಂಬ್‌ ಬೆದರಿಕೆ!

ಪಿತಾಖೈ ಅರಣ್ಯದ ಬಳಿ ಇಬ್ಬರನ್ನು ಮೂವರು ಅಪರಿಚಿತರು ಅಡ್ಡಗಟ್ಟಿ ಬಲವಂತವಾಗಿ ಕಾಡಿಗೆ ಕರೆದೊಯ್ದು ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಆರೋಪಿಗಳು ಅತ್ಯಾಚಾರ ಎಸಗುವುದನ್ನು ಮೊಬೈಲ್ ಫೋನ್‌ನಲ್ಲಿ ರೆಕಾರ್ಡ್ ಮಾಡಿದ್ದಾರೆ. ಅಲ್ಲದೇ ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊವನ್ನು ಅಪ್‌ಲೋಡ್ ಮಾಡಿದ್ದಾರೆ. ಇದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಈ ಸಂಬಂಧ ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಬಾಬಾ ಸಿದ್ದಿಕ್ ಹತ್ಯೆ ಕೇಸ್‌ – ಪಾಕ್ ಡ್ರೋನ್‌ಗಳ ಮೂಲಕ ಗನ್‌ ಪೂರೈಕೆ?

Share This Article