– ಕೂಲ್ ಡ್ರಿಂಕ್ಸ್‌ನಲ್ಲಿ ಮದ್ಯ ಬೆರೆಸಿ ಅತ್ಯಾಚಾರ, 10 ಮಂದಿ ಅರೆಸ್ಟ್
ದಾವಣಗೆರೆ: ಪತಿಯೊಂದಿಗೆ ಜಗಳವಾಡಿ ತವರಿಗೆ ತೆರಳುತ್ತಿದ್ದ ಮಹಿಳೆಯ ಮೇಲೆ ದುರುಳರು ಸಾಮೂಹಿಕ ಅತ್ಯಾಚಾರವೆಸಗಿದ (Gang Rape) ಘಟನೆ ದಾವಣಗೆರೆ (Davanagere) ಜಿಲ್ಲೆಯ ಚನ್ನಗಿರಿ (Channagiri) ತಾಲೂಕಿನ ಬಸವಾ ಪಟ್ಟಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
41 ವರ್ಷದ ಮಹಿಳೆಯ ಮೇಲೆ ದುರುಳರು ಅತ್ಯಾಚಾರವೆಸಗಿದ್ದಾರೆ. ಜೂನ್ 3ರಂದು ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಘಟನೆ ಸಂಬಂಧ ಇಂದು ದೂರು ದಾಖಲಿಸಲಾಗಿದೆ. ಮಹಿಳೆ ಪತಿ ಜೊತೆ ಜಗಳವಾಡಿ ತವರಿಗೆ ಹೊರಟ್ಟಿದ್ದರು. ಈ ವೇಳೆ ಹಂದಿ ಬೇಟೆಗೆ ತೆರಳಿದ್ದ ಯುವಕರು ಮಹಿಳೆಯನ್ನು ಗಮನಿಸಿ, ಸುಸ್ತಾಗಿದಿಯಾ ಕೂಲ್ ಡ್ರಿಂಕ್ಸ್ ಕುಡಿ ಅಕ್ಕ ಎಂದು ಕೂಲ್ ಡ್ರಿಂಕ್ಸ್‌ನಲ್ಲಿ ಮದ್ಯ ಬೆರೆಸಿ ಕುಡಿಸಿದ್ದರು. ಬಳಿಕ ತೋಟಕ್ಕೆ ಕರೆದುಕೊಂಡು ಹೋಗಿ ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ. ರಾತ್ರಿಯಿಂದ ಮುಂಜಾನೆಯವರೆಗೂ ಯುವಕರ ಗುಂಪು ವಿಕೃತಿ ಮೆರೆದಿತ್ತು. ಬಳಿಕ ಬೆತ್ತಲೆ ಫೋಟೋ, ವೀಡಿಯೋ ಮಾಡಿಕೊಂಡು ಆರೋಪಿಗಳು ವಿಕೃತ ಸಂತೋಷಪಟ್ಟಿದ್ದರು. ಅಲ್ಲದೇ ಫೋಟೋ ಹಾಗೂ ವೀಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದರು. ಇದನ್ನೂ ಓದಿ: ಕೊಟ್ಟಿಯೂರಲ್ಲಿ ಕನ್ನಡದಲ್ಲಿ ಮಾತಾಡಿದ್ರೆ ಬೇರೆ ರೀತಿ ವರ್ತನೆ ಮಾಡ್ತಾರೆ – ಭಕ್ತರು
ಘಟನೆ ಬಳಿಕ ಗ್ರಾಮದಲ್ಲಿ ಗುಸುಗುಸು ಚರ್ಚೆ ಆರಂಭವಾಗಿ, ಪ್ರಕರಣ ಗಂಭೀರವಾಗುತ್ತಿದ್ದಂತೆ ಆರೋಪಿಗಳು ವೀಡಿಯೋ ಡಿಲೀಟ್ ಮಾಡಿದ್ದಾರೆ. ಇತ್ತ ಘಟನೆ ಸಂಬಂಧ ಸಂತ್ರಸ್ತೆ ಬಸವಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಪ್ರಕರಣ ಸಂಬಂಧ ಇಸ್ತ್ರೀ ನಾಗರಾಜ್, ನಾಗರಾಜ್, ಅರ್ಜುನಾ, ಬಸವಂತ, ಕುಂದೂರು ಮಾರುತಿ, ಹೆಗ್ಗ ಮಾರುತಿ, ಮನು, ಜೋಗಿ ಸುನೀಲ್, ಪ್ರದೀಪ್ ಹಾಗೂ ಮಧು ಎಂಬ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಅತ್ಯಾಚಾರ ಆರೋಪಿಗಳೆಲ್ಲ ಯಲೋದಹಳ್ಳಿಯವರಾಗಿದ್ದಾರೆ. ಇದನ್ನೂ ಓದಿ: ಮೂವರ ಸಾವಿಗೆ ಕಾರಣವಾಯಿತಾ ಶಕ್ತಿ ಯೋಜನೆ? – ಪತ್ನಿ ಮಗನನ್ನು ಕೊಂದು ಬಟ್ಟೆ ವ್ಯಾಪಾರಿ ಆತ್ಮಹತ್ಯೆ
ಘಟನಾ ಸ್ಥಳಕ್ಕೆ ದಾವಣಗೆರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಹೆಚ್.ಟಿ. ಶೇಖರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸಂತ್ರಸ್ತ ಮಹಿಳೆಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ. ಸದ್ಯ ಬಸವಪಟ್ಟಣ ಪೊಲೀಸ್ ಠಾಣೆಯಿಂದ ಆರೋಪಿಗಳನ್ನು ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಚನ್ನಗಿರಿ ತಾಲೂಕು ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್ ಬಳಿಕ ಕೋರ್ಟ್‌ನಲ್ಲಿ ನ್ಯಾಯಾಧೀಶರ ಮುಂದೆ ಆರೋಪಿಗಳನ್ನು ಹಾಜರುಪಡಿಸಲಾಗುತ್ತದೆ. ಇದನ್ನೂ ಓದಿ: ನಿಮ್ಮಪ್ಪನಿಂದಲೇ ಆರ್‌ಎಸ್‌ಎಸ್‌ಗೆ ಏನು ಮಾಡಲು ಆಗಿಲ್ಲ, ನಿಮ್ಮಿಂದ ಆಗುತ್ತಾ? – ಪ್ರಿಯಾಂಕ್ ಖರ್ಗೆ ವಿರುದ್ಧ ಸಿ.ಟಿ ರವಿ ಕಿಡಿ
