ಹಾಸನ: ಪ್ರಯಾಣಿಸುತ್ತಿದ್ದ ಬಸ್‌ನಲ್ಲೇ (Bus) ಮಹಿಳೆಯೊಬ್ಬರು ಹೆಣ್ಣು ಮಗುವಿಗೆ (Baby) ಜನ್ಮ ನೀಡಿರುವ ಘಟನೆ ಚನ್ನರಾಯಪಟ್ಟಣ-ಹಾಸನ ಮಾರ್ಗಮಧ್ಯೆ ನಡೆದಿದೆ.
ಕೂಲಿ ಕೆಲಸಕ್ಕೆ ಮೂಡುಗೆರೆಗೆ ತೆರಳುತ್ತಿದ್ದ ಸಾರಿಗೆ ಬಸ್‌ನಲ್ಲಿ ಸೋಮವಾರ ಈ ಘಟನೆ ನಡೆದಿದೆ. ಮಹಿಳೆಗೆ ಬಸ್‌ನಲ್ಲಿಯೇ ಹೆರಿಗೆ ನೋವು ಕಾಣಿಸಿಕೊಂಡಿದ್ದು, ತಕ್ಷಣ ಚಾಲಕ ಬಸ್ ಅನ್ನು ನಿಲ್ಲಿದ್ದಾರೆ. ಬಳಿಕ ಬಸ್‌ನ ನಿರ್ವಾಹಕಿ ಗರ್ಭಿಣಿಗೆ ಹೆರಿಗೆ (Delivery) ಮಾಡಿಸಲು ಸಹಾಯ ಮಾಡಿದ್ದಾರೆ.
Advertisement
Advertisement
ಮಹಿಳೆ ಬಸ್‌ನಲ್ಲಿಯೇ ಮಗುವಿಗೆ ಜನ್ಮ ನೀಡಿದ ಬಳಿಕ ಅಂಬುಲೆನ್ಸ್‌ಗೆ ಕರೆ ಮಾಡಿ ತಾಯಿ ಹಾಗೂ ಮಗುವನ್ನು ಶಾಂತಿಗ್ರಾಮದ ಆಸ್ಪತ್ರೆಗೆ ಕಳುಹಿಸಿಕೊಟ್ಟಿದ್ದಾರೆ. ಬಳಿಕ ಬಸ್‌ನ ನಿರ್ವಾಹಕಿ ವಸಂತ ಹಾಗೂ ಪ್ರಯಾಣಿಕರು ಆಸ್ಪತ್ರೆಗೆ ತೆರಳಿ ಮಹಿಳೆಗೆ ಹಣದ ಸಹಾಯ ಮಾಡಿ ಮಾನವೀಯತೆ ಮೆರೆದಿದ್ದಾರೆ. ಇದನ್ನೂ ಓದಿ: ಹಾಡಹಗಲೇ ಡ್ರ್ಯಾಗರ್ ಹಿಡಿದು ಯುವತಿಗೆ ಕಿರುಕುಳ ನೀಡಿದ ದುಷ್ಕರ್ಮಿ – ಮತ್ತೊಬ್ಬ ಮಹಿಳೆಯಿಂದ ರಕ್ಷಣೆ
Advertisement
Advertisement
ಸರಿಯಾದ ಸಮಯದಲ್ಲಿ ಮಹಿಳೆಗೆ ಬಸ್‌ನಲ್ಲಿಯೇ ಹೆರಿಗೆ ಮಾಡಿಸಿ, ಆಸ್ಪತ್ರೆಗೆ ದಾಖಲಿಸಿ, ಆಕೆಗೆ ಹಣದ ಸಹಾಯ ಮಾಡಿರುವ ಬಸ್ ಚಾಲಕ, ನಿರ್ವಾಹಕಿ ಹಾಗೂ ಪ್ರಯಾಣಿಕರ ಕಾರ್ಯಕ್ಕೆ ಸಾರ್ವಜನಿಕ ವಲಯದಲ್ಲಿ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ. ಇದನ್ನೂ ಓದಿ: ಸಿಎಂ ಪಟ್ಟಕ್ಕೆ ಸಿದ್ದು ಪಟ್ಟು – ದೆಹಲಿಯಲ್ಲಿ ಬೆಂಬಲಿಗರ ಜೊತೆ ಬಲ ಪ್ರದರ್ಶನ