ಭೋಪಾಲ್: ಮಧ್ಯಪ್ರದೇಶದ (Madhya Pradesh) ಗ್ವಾಲಿಯರ್ (Gwalior) ಜಿಲ್ಲೆಯಲ್ಲಿ ಮಹಿಳೆಯೊಬ್ಬರು ನಾಲ್ಕು ಕಾಲುಗಳಿರುವ ಹೆಣ್ಣು ಮಗುವಿಗೆ ಜನ್ಮ ನೀಡಿರುವುದು ಜನರಲ್ಲಿ ಅಚ್ಚರಿ ಮೂಡಿಸಿದೆ.
ಸಿಕಂದರ್ ಕಂಪೂ ಪ್ರದೇಶದ ಆರತಿ ಕುಶ್ವಾಹ ಅವರು ಕಮಲರಾಜ ಆಸ್ಪತ್ರೆಯ ಮಹಿಳಾ ಮತ್ತು ಮಕ್ಕಳ ವಿಭಾಗದಲ್ಲಿ ಮಗುವಿಗೆ ಜನ್ಮ ನೀಡಿದ್ದಾರೆ. ಮಗು ಆರೋಗ್ಯವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಹೆಣ್ಣು ಮಗುವಿನ ತೂಕ 2.3 ಕೆಜಿ ಇದೆ. ಗ್ವಾಲಿಯರ್‌ನ ಜಯರೋಗ ಆಸ್ಪತ್ರೆಯ ಅಧೀಕ್ಷಕರೊಂದಿಗೆ ವೈದ್ಯರ ತಂಡವು ಶಿಶುವನ್ನು ಪರೀಕ್ಷೆಗೊಳಪಡಿಸಿತು. ಇದನ್ನೂ ಓದಿ: 100 ದಿನ ಪೂರೈಸಿದ ಭಾರತ್ ಜೋಡೋ ಯಾತ್ರೆ – ಇದು ಮಹಾಸಾಧನೆ ಅಂದ್ರು ಕಾಂಗ್ರೆಸ್ ನಾಯಕರು
Advertisement
Advertisement
ಜಯರೋಗ್ಯ ಆಸ್ಪತ್ರೆ ಸೂಪರಿಂಟೆಂಡೆಂಟ್ ಡಾ. ಆರ್.ಕೆ.ಎಸ್.ಧಕಡ್ ಮಾತನಾಡಿ, ನಾಲ್ಕು ಕಾಲಿರುವ ಮಗು ಜನಿಸಿದೆ. ಆ ಮಗುವಿಕೆ ಅಂಗ ವಿಕಲತೆ ಇದೆ. ಈ ರೀತಿಯ ಹೆಚ್ಚಿನ ಅಂಗಗಳೊಂದಿಗೆ ಜನಿಸುವ ಶಿಶುಗಳಿಗೆ ವೈದ್ಯಕೀಯ ವಿಜ್ಞಾನದ ಭಾಷೆಯಲ್ಲಿ ಇಶಿಯೋಪಾಗಸ್ ಎಂದು ಕರೆಯಲಾಗುತ್ತದೆ. ಈ ಹೆಣ್ಣು ಮಗುವಿನ ಸೊಂಟದ ಕೆಳಗಿನ ಭಾಗವು ಎರಡು ಹೆಚ್ಚುವರಿ ಕಾಲುಗಳೊಂದಿಗೆ ಅಭಿವೃದ್ಧಿಗೊಂಡಿದೆ. ಆದರೆ ಆ ಕಾಲುಗಳು ನಿಷ್ಕ್ರಿಯವಾಗಿವೆ ಎಂದು ತಿಳಿಸಿದ್ದಾರೆ.
Advertisement
ಮಕ್ಕಳ ವಿಭಾಗದ ವೈದ್ಯರು ದೇಹದ ಯಾವುದೇ ಭಾಗದಲ್ಲಿ ಬೇರೆ ಯಾವುದೇ ವಿಕಾರವಿದೆಯೇ ಎಂದು ಪರಿಶೀಲಿಸುತ್ತಿದ್ದಾರೆ. ಮಗುವಿಗೆ ಯಾವುದೇ ಅಪಾಯವಿಲ್ಲ ಎಂದರೆ, ನಂತರ ಆ ಕಾಲುಗಳನ್ನು ಶಸ್ತ್ರಚಿಕಿತ್ಸೆಯ ಮೂಲಕ ತೆಗೆದುಹಾಕಲಾಗುತ್ತದೆ. ಇದರಿಂದ ಮಗು ಮುಂದೆ ಸಹಜ ಜೀವನ ನಡೆಸಬಹುದು ಎಂದು ವೈದ್ಯರು ಹೇಳಿದ್ದಾರೆ. ಇದನ್ನೂ ಓದಿ: ಕರ್ನಾಟಕದಲ್ಲಿ ಝಿಕಾ ವೈರಸ್ ಭೀತಿ – ಚಿಕಿತ್ಸಾ ಕ್ರಮ ಪಟ್ಟಿ ಬಿಡುಗಡೆ ಮಾಡಿದ ಆರೋಗ್ಯ ಇಲಾಖೆ
Advertisement
ಈ ವರ್ಷದ ಮಾರ್ಚ್‌ನಲ್ಲಿ ಮಧ್ಯಪ್ರದೇಶದ ರತ್ಲಾಮ್‌ನಲ್ಲಿ ಮಹಿಳೆಯೊಬ್ಬರು ಎರಡು ತಲೆ, ಮೂರು ಕೈಗಳು ಮತ್ತು ಎರಡು ಕಾಲುಗಳಿರುವ ಮಗುವಿಗೆ ಜನ್ಮ ನೀಡಿದ್ದರು.