ಬೆಂಗಳೂರು: ಪತ್ನಿಯ ಕಿರುಕುಳಕ್ಕೆ ನೊಂದು ಪತಿ ಆತ್ಮಹತ್ಯೆ 24 ಪೇಜ್‍ಗಳ ಡೆತ್‍ನೋಟ್ ಬರೆದಿಟ್ಟು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಶರಣಾಗಿರುವ ಘಟನೆ ನಗರದ ಚೋಳೂರು ಪಾಳ್ಯದಲ್ಲಿ ನಡೆದಿದೆ.
ಮೋಹನ್ (38) ಆತ್ಮಹತ್ಯೆ ಮಾಡಿಕೊಂಡ ಪತಿ. ಮೋಹನ್ ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಎಸ್‍ಪಿ ರವಿ ಡಿ ಚೆನ್ನಣ್ಣವರ ಹೆಸರಿಗೆ 24 ಪುಟ ಡೆತ್‍ನೋಟ್ ಬರೆದಿಟ್ಟು ಸಾವನ್ನಪ್ಪಿದ್ದಾರೆ.
Advertisement
Advertisement
ಏನಿದು ಘಟನೆ: ಮೋಹನ್ ನಗರದ ಖಾಸಗಿ ಸಂಸ್ಥೆಯಲ್ಲಿ ಲೆಕ್ಕಪರಿಶೋಧಕರಾಗಿ ಕಾರ್ಯನಿರ್ವಹಿಸುತ್ತಿದ್ದು, 11 ವರ್ಷಗಳ ಹಿಂದೆ ಗಂಗಾಲಕ್ಷ್ಮೀ ಎಂಬವರನ್ನು ಮದುವೆಯಾಗಿದ್ದರು. ಆದರೆ ಕಳೆದ ಒಂದು ವರ್ಷದಿಂದ ಮೋಹನ್ ಕಾರ್ಯನಿರ್ವಹಿಸುವ ಸಂಸ್ಥೆ ಮಾಲೀಕರೊಂದಿಗೆ ಪತ್ನಿ ಅಕ್ರಮ ಸಂಬಂಧ ಹೊಂದಿದ್ದಳು.
Advertisement
ಈ ವಿಚಾರ ತಿಳಿದ ಮೋಹನ್ ಪತ್ನಿಗೆ ಬುದ್ಧಿವಾದವನ್ನು ಹೇಳಿದ್ದರು ಎನ್ನಲಾಗಿದೆ. ಆದರೆ ಮೋಹಾನ್ ಮಾತಿಗೆ ಬೆಲೆ ನೀಡದ ಆಕೆ ತನ್ನ ಕಾರ್ಯವನ್ನು ಮುಂದುವರೆಸಿದ್ದು, ಅಲ್ಲದೇ ಇಬ್ಬರು ಸೇರಿ ಪತಿಗೆ ಕಿರುಕುಳ ನೀಡುತ್ತಿದ್ದರು. ಇದೇ ಕಾರಣಕ್ಕೆ ಹಲವು ಬಾರಿ ಮನೆಯಲ್ಲಿ ಇಬ್ಬರ ನಡುವೆ ಜಗಳ ನಡೆದಿತ್ತು. ಇದ್ದರಿಂದ ಮನನೊಂದ ಮೋಹನ್ ಡೆತ್‍ನೋಟ್ ಬರೆದಿಟ್ಟು ಆತ್ನಹತ್ಯೆ ಮಾಡಿಕೊಂಡಿದ್ದಾರೆ. ಪತ್ನಿ ಹಾಗೂ ಸಂಸ್ಥೆಯ ಮಾಲೀಕ ಕಿರುಕುಳ ನೀಡುತ್ತಿರುವ ಬಗ್ಗೆ ವಿಡಿಯೋದಲ್ಲಿ ಹೇಳಿಕೆ ನೀಡಲಾಗಿದೆ ಎಂಬ ಮಾಹಿತಿ ಸಿಕ್ಕಿದೆ.