– 40 ಕೆ.ಜಿ ಗಾಂಜಾ ವಶಪಡಿಸಿಕೊಂಡ ಎನ್‌ಸಿಬಿ
ಹೈದರಾಬಾದ್: ರಾಜೀವ್ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Rajiv Gandhi International Airport) ಬುಧವಾರ ಮಹಿಳಾ ಪ್ರಯಾಣಿಕರೊಬ್ಬರ ಲಗೇಜ್‌ನಿಂದ 14 ಕೋಟಿ ರೂ. ಮೌಲ್ಯದ 40 ಕೆಜಿ ಹೈಡ್ರೋಪೋನಿಕ್ ಗಾಂಜಾವನ್ನು (Hydroponic Ganja) ಎನ್‌ಸಿಬಿ (Narcotics Control Bureau) ವಶಪಡಿಸಿಕೊಂಡಿದ್ದು, ಮಹಿಳೆಯನ್ನು ಬಂಧಿಸಿದೆ.
ಈ ಕುರಿತು ಪ್ರಕಟಣೆ ಬಿಡುಗಡೆ ಮಾಡಿದ ಎನ್‌ಸಿಬಿ, ಗುಪ್ತಚರ ಮಾಹಿತಿಯ ಮೇರೆಗೆ ಕಾರ್ಯನಿರ್ವಹಿಸಿದ ಎನ್‌ಸಿಬಿ ಅಧಿಕಾರಿಗಳು ಮಹಿಳೆಯನ್ನು ತಡೆದು ಆಕೆಯ ಎರಡು ಚೆಕ್-ಇನ್ ಬ್ಯಾಗ್‌ಗಳಿಂದ 40 ಕೆಜಿ ಗಾಂಜಾ ವಶಪಡಿಸಿಕೊಂಡಿದ್ದಾರೆ ಎಂದು ತಿಳಿಸಿದೆ. ಇದನ್ನೂ ಓದಿ: ತಿರುಪತಿಯಲ್ಲಿ ಮದುವೆ ಆಗುವ ಕನ್ನಡಿಗರಿಗೆ ಗುಡ್‌ನ್ಯೂಸ್ – ತಿರುಮಲದ ಕಲ್ಯಾಣ ಮಂಟಪದಲ್ಲಿ ಮೊದಲ ಮದುವೆ
ಬ್ಯಾಂಕಾಕ್‌ನಿಂದ ನೇರವಾಗಿ ವಿವಿಧ ಭಾರತೀಯ ವಿಮಾನ ನಿಲ್ದಾಣಗಳಿಗೆ ಬರುವ ಪ್ರಯಾಣಿಕರಿಂದ ಹೈಡ್ರೋಪೋನಿಕ್ ಗಾಂಜಾವನ್ನು ವಶಪಡಿಸಿಕೊಂಡಿರುವ ಅನೇಕ ನಿದರ್ಶನಗಳು ಇರುವುದರಿಂದ ಮಹಿಳೆ ಯಾರಿಗೂ ಅನುಮಾನ ಬಾರದಂತೆ ಬ್ಯಾಂಕಾಕ್‌ನಿಂದ ಕಳ್ಳಸಾಗಣೆ ಮಾಡಿ ದುಬೈ ಮೂಲಕ ಭಾರತಕ್ಕೆ ಬಂದಿದ್ದಾಳೆ ಎಂದು ತನಿಖೆಯಿಂದ ತಿಳಿದುಬಂದಿದೆ. ಥೈಲ್ಯಾಂಡ್ ಮತ್ತು ಭಾರತದಲ್ಲಿ ಮಹಿಳೆಗಿರುವ ಲಿಂಕ್ ಅನ್ನು ಪತ್ತೆಹಚ್ಚಲು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಎನ್‌ಸಿಬಿ ಮಾಹಿತಿ ನೀಡಿದೆ. ಇದನ್ನೂ ಓದಿ: ಕುಡಿದ ಮತ್ತಿನಲ್ಲಿ ತಾಯಿಗೆ ಬೆಂಕಿ – ಶವದ ಪಕ್ಕವೇ ಮಲಗಿದ್ದ ಪುತ್ರ ಅರೆಸ್ಟ್