ಬಾಗಲಕೋಟೆ: ಮಹಿಳೆಯೊಬ್ಬರು ಸೀಮೆ ಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಜಿಲ್ಲೆಯ ವಿದ್ಯಾಗಿರಿಯಲ್ಲಿ ನಡೆದಿದೆ.
ವೀರಾಪೂರ ಮೂಲದ 41 ವರ್ಷದ ದಾಕ್ಷಾಯಣಿ ಪಾಟೀಲ ಆತ್ಮಹತ್ಯೆಗೆ ಶರಣಾದ ಮಹಿಳೆ. ಎಲ್ಲರೂ ಮಲಗಿದ್ದ ವೇಳೆ ದಾಕ್ಷಾಯಣಿ ಅವರು ಮೈ ಮೇಲೆ ಸೀಮೆ ಎಣ್ಣೆ ಸುರಿದುಕೊಂಡು ಬಣವೆ ಮೇಲೆ ಬಿದ್ದ ಪರಿಣಾಮ ದೇಹ ಸುಟ್ಟು ಕರಕಲಾಗಿದೆ.
ಆತ್ಮಹತ್ಯೆಗೆ ಕಾರಣವೇನೆಂಬುದು ತಿಳಿದುಬಂದಿಲ್ಲ. ಘಟನಾ ಸ್ಥಳಕ್ಕೆ ಶಹರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.