ಬೀದರ್: ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಗೆ ವೈದ್ಯರು ಸರಿಯಾದ ಚಿಕಿತ್ಸೆ ನೀಡದೇ ನಿರ್ಲಕ್ಷ್ಯ ಮಾಡಿದ ಪರಿಣಾಮ ಇಂದು (ಮಂಗಳವಾರ) ಮಹಿಳೆ ಸಾವನ್ನಪ್ಪಿದ ಘಟನೆ ಬೀದರ್ (Bidar) ಜಿಲ್ಲೆಯ ಹುಮ್ನಾಬಾದ್ ತಾಲೂಕಿನ ದುಬಲಗುಂಡಿ ಗ್ರಾಮದಲ್ಲಿ ನಡೆದಿದೆ.
ನಾಗಮ್ಮ ನರಸಪ್ಪ (63) ಮೃತ ಮಹಿಳೆಯಾಗಿದ್ದು, ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರ ಮತ್ತು ಸಿಬ್ಬಂದಿಗಳ ನಿರ್ಲಕ್ಷಕ್ಕೆ ಬಲಿಯಾಗಿದ್ದಾರೆ ಎಂದು ಆರೋಪಿಸಲಾಗಿದೆ. ಇದನ್ನೂ ಓದಿ: ವಿಕ್ರಂ ಗೌಡ ನಕ್ಸಲ್ ತಂಡ ಸೇರಿದ್ದು ಹೇಗೆ? ಮನೆ ಮನೆಗೆ ಹೇಗೆ ಬರುತ್ತಿದ್ದರು? – ಸ್ಥಳೀಯರು ಬಿಚ್ಚಿಟ್ಟ ಸತ್ಯ ಓದಿ
ಆಸ್ಪತ್ರೆಯ ಸಿಬ್ಬಂದಿಗಳ ನಿರ್ಲಕ್ಷತನದಿಂದ ಮಹಿಳೆ ಸಾವನ್ನಪ್ಪಿದ್ದಾಳೆ ಎಂದು ಮೃತ ಮಹಿಳೆಯ ಸಂಬಂಧಿಕರು ಆರೋಪ ಮಾಡಿ ಆಸ್ಪತ್ರೆ ಮುಂದೆ ಪ್ರತಿಭಟನಾ ಧರಣಿ ಮಾಡುತ್ತಿದ್ದಾರೆ. ಆಸ್ಪತ್ರೆ ಮುಂದೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು ತಪ್ಪಿತಸ್ಥರ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳಬೇಕೆಂದು ಪ್ರತಿಭಟನಾಕಾರರು ಆಕ್ರೋಶ ಹೊರ ಹಾಕಿದ್ದಾರೆ. ಇದನ್ನೂ ಓದಿ: ಕ್ಷೇತ್ರದ ಅಭಿವೃದ್ಧಿಗೆ ಅನುದಾನವೇ ಸಿಗುತ್ತಿಲ್ಲ: ಸರ್ಕಾರದ ವಿರುದ್ಧವೇ ಕೈ ಶಾಸಕ ಗವಿಯಪ್ಪ ಆಕ್ರೋಶ
ಘಟನೆಯ ಸುದ್ದಿ ತಿಳಿದು ಸ್ಥಳಕ್ಕೆ ಜಿಲ್ಲಾ ಆರೋಗ್ಯಾಧಿಕಾರಿ ಡಾ. ಜ್ಞಾನೇಶ್ವರ್ ನಿರಗುಡೆ ಭೇಟಿ ನೀಡಿದ್ದು, ತರಾಟೆಯ ಬಳಿಕ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದೆಂದು ಪ್ರತಿಭಟನಾಕಾರರಿಗೆ ಭರವಸೆ ನೀಡಿದ್ದಾರೆ. ಡಿಹೆಚ್‌ಒ ಭರವಸೆ ಮೇರೆಗೆ ಕುಟುಂಬಸ್ಥರು ಮತ್ತು ಗ್ರಾಮಸ್ಥರು ಪ್ರತಿಭಟನೆ ಕೈಬಿಟ್ಟಿದ್ದು ಈ ಕುರಿತು ಹಳ್ಳಿಖೇಡ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ. ಇದನ್ನೂ ಓದಿ: ಈಗಿನ ಸರ್ಕಾರ ಬಂದ್ಮೇಲೆ ಮತ್ತೆ ನಕ್ಸಲರ ಚಟುವಟಿಕೆಗಳು ಶುರುವಾಗಿದೆ – ಸುನೀಲ್ ಕುಮಾರ್