ಲಕ್ನೋ: ʻಇದ್ದಕ್ಕಿದ್ದಂತೆ ಬಿಲ್ಡಿಂಗ್‌ವೊಂದರಿಂದ ಮಹಿಳೆಯ ಚೀರಾಟ ಕೇಳಿಬಂತು, ಕುತೂಹಲದಿಂದ ನೆರೆಯವರೆಲ್ಲ ಕಿಟಕಿ, ಬಾಲ್ಕನಿಯಲ್ಲಿ ನಿಂತು ಇಣುಕಿದ್ರು. ಕೆಲ ಸೆಕೆಂಡುಗಳಲ್ಲಿ ತಾಯಿ ಮಗು ಇಬ್ಬರ ದೇಹ ನೆಲ್ಲಕ್ಕೆ ರಪ್ಪನೆ ಅಪ್ಪಳಿಸಿತು, ರಸ್ತೆಗೆಲ್ಲ ರಕ್ತ ಚಿಮ್ಮಿತು. ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ತಾಯಿ, ಮಗುವಿನ ಪ್ರಾಣ ಪಕ್ಷಿ ಹಾರಿತು. ಇದೀಗ ಈ ಘಟನೆ ಅಲ್ಲಿನ ಸ್ಥಳೀಯರನ್ನೂ ಬೆಚ್ಚಿಬೀಳುವಂತೆ ಮಾಡಿದೆ. ಹೃದಯ ಕಲಕುವ ಈ ಘಟನೆ ನಡೆದಿದ್ದು, ಗ್ರೇಟರ್ ನೋಯ್ಡಾದಲ್ಲಿ (Greater Noida).
ಹೌದು. ಮಗನ ದೀರ್ಘಕಾಲದ ಮಾನಸಿಕ ಅಸ್ವಸ್ಥತೆಯಿಂದ ಬೇಸತ್ತಿದ್ದ ಮಹಿಳೆ ಸಾಕ್ಷಿ ಚಾವ್ಲಾ (Sakshi Chawla) (37) ತನ್ನ 11 ವರ್ಷ ಮಗನೊಂದಿಗೆ (ಮಗ ದಕ್ಷ) 13ನೇ ಮಹಡಿಯಿಂದ ಹಾರಿ ಪ್ರಾಣಬಿಟ್ಟಿದ್ದಾರೆ. ಇದನ್ನೂ ಓದಿ: ಭಾರತ vs ಪಾಕ್ | 26 ಜೀವಗಳಿಗಿಂತ ಹಣಕ್ಕೆ ಅಷ್ಟೊಂದು ಮಹತ್ವವೇ? – ಅಸಾದುದ್ದೀನ್ ಓವೈಸಿ ಕಿಡಿ
ಘಟನೆ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಪೊಲೀಸರು ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳಿಸೋದಕ್ಕೂ ಮುನ್ನವೇ ಮನೆಯನ್ನ ಶೋಧಿಸಿದ್ದಾರೆ. ಈವೇಳೆ ಮೃತ ಮಹಿಳೆ ಸಾಕ್ಷಿ ಪತಿಗೆ ಬರೆದಿದ್ದ ಡೆತ್‌ನೋಟ್ ಪತ್ತೆಯಾಗಿದೆ. ಇದರಲ್ಲಿ ʻನಾವು ಈ ಲೋಕವನ್ನು ತೊರೆಯುತ್ತಿದ್ದೇವೆ.. ಕ್ಷಮಿಸಿ… ನಾವು ಇನ್ಮುಂದೆ ನಿಮಗೆ ತೊಂದರೆ ಕೊಡಲು ಬಯಸುವುದಿಲ್ಲ. ನಮ್ಮಿಂದಾಗಿ ನಿಮ್ಮ ಜೀವನ ಹಾಳಾಗಬಾರದು. ನಮ್ಮ ಸಾವಿಗೆ ಯಾರೂ ಕಾರಣವಲ್ಲʼ ಎಂದು ಬರೆದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಪೊಲೀಸರ ಪ್ರಕಾರ, ಇದು ಆತ್ಮಹತ್ಯೆಯೇ. ಸಾಕ್ಷಿ ಅವರ ಮಗ ದಕ್ಷ ಮಾನಸಿಕ ಅಸ್ವಸ್ಥನಾಗಿದ್ದು, ದೀರ್ಘಕಾಲದಿಂದ ಚಿಕಿತ್ಸೆ ಪಡೆಯುತ್ತಿದ್ದ. ಇದರಿಂದಾಗಿ ಶಾಲೆಗೂ ಹೋಗುತ್ತಿರಲಿಲ್ಲ. ವಿಪರೀತ ಔಷಧ ಸೇವಿಸಬೇಕಿತ್ತು. ಇದರಿಂದ ಸಾಕ್ಷಿ ಬಹಳ ನೊಂದಿದ್ದಳು. ತನ್ನ ಕಷ್ಟವನ್ನು ನೆರೆಯವರೊಂದಿಗೆ ಹೇಳಿಕೊಳ್ಳುತ್ತಿದ್ದಳು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಭಾರತ-ಪಾಕ್ ಕದನ ಯಾವಾಗಲೂ ಏಕೆ ರಣಕಣ? – ಆಕ್ರಮಣಕಾರಿ ಆಟಕ್ಕೆ ಟೀಂ ಇಂಡಿಯಾ ರೆಡಿ!
ನಿನ್ನೆ ಬೆಳಗ್ಗೆ 9 ಗಂಟೆ ಸುಮಾರಿಗೆ ಪತಿ ದರ್ಪಣ್ ಚಾವ್ಲಾ, ಹೆಂಡತಿಯನ್ನ ಎಬ್ಬಿಸಿ ಮಗನಿಗೆ ಔಷಧಿ ಕೊಡುವಂತೆ ಹೇಳಿದ್ದರು. ಅದರಂತೆ ಔಷಧಿ ಕೊಟ್ಟು ಬಳಿಕ ಮಗನನ್ನ ಬಾಲ್ಕನಿಗೆ ವಾಕಿಂಗ್‌ಗೆ ಕರೆದೊಯ್ದಿದ್ದಳು ಸಾಕ್ಷಿ. ಇದಾದ ಕೆಲವೇ ಕ್ಷಣಗಳಲ್ಲಿ ಇಬ್ಬರು 13ನೇ ಮಹಡಿಯಿಂದ ಕೆಳಗೆ ಬಿದ್ದಿದ್ದಾರೆ. ಈ ದುರಂತವು ನೆರೆಹೊರೆಯವರನ್ನೂ ಬೆಚ್ಚಿಬೀಳಿಸಿದೆ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ. ಇದನ್ನೂ ಓದಿ: ಕುಟುಂಬ ರಾಜಕಾರಣದಲ್ಲಿ ದೇಶದಲ್ಲೇ ಕರ್ನಾಟಕಕ್ಕೆ ನಾಲ್ಕನೇ ಸ್ಥಾನ